ರಾಜಕೀಯ

ಲೋಕಸಭೆ ಚುನಾವಣೆ; ಬಿಜೆಪಿ ಸೇರಿದ ಒಲಂಪಿಕ್‌ ಪದಕ ವಿಜೇತ

ನವದೆಹಲಿ: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಮೊದಲು ಒಲಂಪಿಕ್‌ ಪದಕ ತಂದುಕೊಟ್ಟ ಹಾಗೂ ಕಾಂಗ್ರೆಸ್‌ ನಾಯಕನಾಗಿದ್ದ ವಿಜೇಂದರ್‌ ಸಿಂಗ್‌ ಇಂದು ( ಏಪ್ರಿಲ್‌ 3) ಬಿಜೆಪಿ ಸೇರಿದ್ದಾರೆ.

ವಿಜೇಂದರ್‌ ಸಿಂಗ್‌ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಮಥುರ ಕ್ಷೇತ್ರದ ಹಾಲಿ ಸಂಸದೆ ಮತ್ತು ನಟಿ ಹೇಮಾ ಮಾಲಿನಿ ವಿರುದ್ಧ ವಿಜೇಂದರ್‌ ಸಿಂಗ್‌ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಯೋಜಿಸಿತ್ತು. ಆದರೆ ವಿಜೇಂದರ್‌ ಸಿಂಗ್‌ ಅವರು ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ.

ಜಾಟ್ ಸಮುದಾಯದ ವಿಜೇಂದರ್ ಸಿಂಗ್ ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದಿವೆ ಮೂಲಗಳು. ವಿಜೇಂದರ್ ಸಿಂಗ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದಿದ್ದರು. ಬಳಿಕ 2009ರ ವಿಶ್ವ ಚಾಂಪಿಯನ್ ಶಿಪ್ ಮತ್ತು 2010ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದು ಗಮನ ಸೆಳೆದಿದ್ದರು.

andolana

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

8 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago