ಧಾರವಾಡ : ಬೆಂಗಳೂರಿನ ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್ ಬೆದರಿಕೆ ಹಾಕಿರುವುದಕ್ಕೆ ರಾಜ್ಯ ಸರ್ಕಾರದ ದುರ್ಬಲ ನಾಯಕತ್ವವೇ ಕಾರಣ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದು ಜನರಲ್ಲಿ ಭಯದ ವಾತವಾರಣ ಸೃಷ್ಟಿಸಿ ಆಡಳಿತ ಮಾಡುವ ಹುನ್ನಾರ. ಯಾವುದೇ ಕಾರಣಕ್ಕೂ ಈ ರೀತಿಯ ಕೃತ್ಯಕ್ಕೆ ಕೈ ಹಾಕುವ ದೇಶದ್ರೋಹಿಗಳನ್ನು ಸುಮ್ಮನೆ ಬಿಡಬಾರದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಸರ್ಕಾರ ಈಗಾಗಲೇ ಆರೋಪಿಗಳನ್ನು ಬಂಧಿಸಬೇಕಿತ್ತು. ಈ ಸರ್ಕಾರ ಆಡಳಿತದಲ್ಲಿ ಹಿಡಿತವಿಲ್ಲದೆ ನಡೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.
ನೆನ್ನೆ ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.
ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.
ಬೆದರಿಕೆ ಮೇಲ್ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.
ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್ ಸಿಬ್ಬಂಧಿ ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವರೆಗೂ ಆರೋಪಿಗಳ ಪತ್ತೆಯಾಗಿಲ್ಲ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…