ಬೆಂಗಳೂರು : ಕಾಂಗ್ರೆಸ್ ಪಕ್ಷದೊಳಗಿನ ಭ್ರಷ್ಟಾಚಾರದ ಮಟ್ಟ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟಿಲ್ ಯತ್ನಾಳ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಒಡೆತನದ ಸ್ಥಳಗಳ ಮೇಲೆ ಆದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು 300 ಕೋಟಿಗೂ ಹೆಚ್ಚಿನ ಹಣವನ್ನು ವಶಪಡಿಸಿಕೊಂಡಿರುವ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ, ಬಿಜೆಪಿ ನಾಯಕ ಬಸನಗೌಡ ಪಾಟಿಲ್ ಯತ್ನಾಳ್ ಕಾಂಗ್ರೆಸ್ ಪಕ್ಷದೊಳಗಿನ ಭ್ರಷ್ಟಾಚಾರದ ಮಟ್ಟ ಎಲ್ಲೆ ಮೀರಿದೆ. ಈ ಅಕ್ರಮ ಹಣದ ಮೂಲವೇನು ? ಇಷ್ಟೊಂದು ಪ್ರಮಾಣದ ಹಣವನ್ನು ಧೀರಜ್ ಸಾಹು ಹೇಗೆ ಸಂಗ್ರಹಿಸಿದ್ದ ? ಇಂತಹ ಭ್ರಷ್ಟಾಚಾರದಿಂದಾಗಿಯೇ ಕಾಂಗ್ರೆಸ್ ರಾಜಕೀಯದಲ್ಲಿ ಅಧೋಗತಿಗೆ ಇಳಿದಿದೆ. ಇಂತಹ ಭ್ರಷ್ಟ ವ್ಯಕ್ತಿಗಳ ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳುವ ಮೂಲಕ ಸರಿಯಾಗಿ ಬಿಸಿ ಮುಟ್ಟಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಒಡಿಶಾದ ಬೌಧ್ ಡಿಸ್ಟಿಲರಿ ಪ್ರೈವೆಟ್ ಲಿಮಿಟೆಡ್ ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಅನುಮಾನದ ಮೇರೆಗೆ ಡಿಸೆಂಬರ್ 6 ರಂದು ಬೌಧ್ ಮದ್ಯ ತಯಾರಿಕಾ ಕಂಪನಿ ಹಾಗೂ ಅದರ ಸಹ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಬರೋಬ್ಬರಿ 300 ಕೋಟಿ ರೂಪಾಯಿಗೂ ಹೆಚ್ದಾಚಿನ ಮೌಲ್ಖಯ ದಾಖಲೆ ಇಲ್ಲದ ಹಣ ಪತ್ತೆಯಾಗಿತ್ತು. ಸುಮಾರು 40 ನೋಟು ಎಣಿಕೆ ಯಂತ್ರಗಳನ್ನು ಬಳಸಿ ನೋಟು ಎಣಿಕೆ ಮಾಡಲಾಗಿತ್ತು. ಡಿಸೆಂಬರ್ 6 ರಂದು ಆರಂಭವಾದ ನೋಟು ಏಣಿಕೆ ಕಾರ್ಯ ಮೂರು ದಿನವಾದರೂ ಮುಗಿದಿರಲಿಲ್ಲ.
ಕಾಂಗ್ರೆಸ್ ನಾಯಕ ಧೀರಜ್ ಸಾಹು ಅವರು ಮದ್ಯ ತಯಾರಿಕಾ ಕಂಪನಿ ಬಲದೇವ್ ಸಾಹು ಅಂಡ್ ಗ್ರೂಪ್ ಕಂಪನಿಗಳೊಂದಿಗೆ ಸಂಬಂಧ ಹೊದ್ದಿದ್ದಾರೆ ಎನ್ನಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…