ಬೆಳಗಾವಿ : ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ, ಧರ್ಮಾಧಿಕಾರಿ ತನ್ವೀರ್ ಹಶ್ಮಿ ಅವರು ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ನನಗೆ ಬಹಳಾ ವರ್ಷಗಳಿಂದ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲಾ ಇವರು ಸುಮ್ಮನಿದ್ದರು. ಯತ್ನಳ್ ಒಬ್ಬ ಮಹಾನ್ ಸುಳ್ಳುಗಾರ. ಅವರಿಗೆ ವಿಪಕ್ಷ ನಾಯಕ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಅಂತಾ ಬೇಸರ, ಹತಾಶೆ, ಸಿಟ್ಟು. ಅದಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ತನಿಖೆ ಮಾಡಿಸಲಿ ಎಂದಿದ್ದಾರೆ.
ಯತ್ನಾಳ್ ಅವರ ಆರೋಪದ ಕುರಿತು ನೆನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್ ಹಶ್ಮಿ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.
ಯತ್ನಾಳ್ ಅವರು ನನಗೆ ಐಸಿಸ್ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್ ಬುಕ್ ಖಾತೆಗೆ ನಾನೇ ಅಪ್ಲೋಡ್ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್ ನ ಬಾಗ್ದಾದ್ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…