ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಹೀಗಾಗಿ ಅವರು ತಮ್ಮ ತಂದೆಯ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಇಕ್ಬಾಲ್ ಹುಸೇನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ 30,029 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ 25,921 ಮತಗಳನ್ನು ಪಡೆದು ಸುಮಾರು 4 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.
ರಾಮನಗರ ಮೊದಲಿನಿಂದಲೂ ಜೆಡಿಎಸ್‌ನ, ಅದರಲ್ಲೂ ಎಚ್.ಡಿ. ಕುಮಾರಸ್ವಾಮಿ ಅವರ ಭದ್ರಕೋಟೆ. ಸತತವಾಗಿ ಗೆಲುವು ಸಾಧಿಸುತ್ತಿದ್ದ ಅವರು ಹಿಂದಿನ ಉಪಚುನಾವಣೆಯಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಗೆ ನೀಡಿದ್ದರು. ಕಳೆದ ಬಾರಿ ಪತ್ನಿಯನ್ನು ಗೆಲ್ಲಿಸಿಕೊಂಡಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಈ ಬಾರಿ ಪುತ್ರನನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳಲು ಹೊರಟಿದ್ದಾರೆ.
ಈ ಬಾರಿ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 1,06,512 ಪುರುಷ ಮತದಾರರು, 1,09,530 ಮಹಿಳೆಯರು, 19 ಇತರ ಮತದಾರರು ಸೇರಿ ಒಟ್ಟು 2,19,079 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.84.09 ರಷ್ಟು ದೊಡ್ಡ ಪ್ರಮಾಣದ ಮತದಾನ ನಡೆದಿತ್ತು.
2018ರಲ್ಲಿ ಇಲ್ಲಿ ಎಚ್‌ಡಿ ಕುಮಾರಸ್ವಾಮಿ ಜಯ ಸಾಧಿಸಿದ್ದರು. ಅವರು 92626 ಮತಗಳನ್ನು ಪಡೆದು 69990 ಮತಗಳನ್ನು ಪಡೆದುಕೊಂಡಿದ್ದ ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ ಎಚ್.ಎ. ವಿರುದ್ಧ 22636 ಮತಗಳ ಅಂತರದ ಭರ್ಜರಿ ಜಯ ಸಾಧಿಸಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…