ಜೈಲುಗಳಲ್ಲಿ ವಿಐಪಿ ರೂಂ ಕ್ಯಾನ್ಸಲ್ ಮಾಡಿದ ಪಂಜಾಬ್ ಸರ್ಕಾರ!
ಚಂಡೀಗಢ : ಪಂಜಾಬಿನ ಮುಖ್ಯಮಂತ್ರಿ ಭಗವಂತ್ ಮಾನ್ ಪಂಜಾಬ್ ಜೈಲಿನಲ್ಲಿರುವ ವಿಐಪಿ ಕೊಠಡಿ ಸೌಲಭ್ಯವನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ.
ವಿಐಪಿ ಸಂಸ್ಕ್ರತಿಯನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಜೊತೆಗೆ ಜೈಲಿನ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್ಗಳನ್ನಾಗಿ ಪರಿವರ್ತಿಸಲು ಘೋಷಿಸಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.