ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಪ್ರಧಾನಿಯಾಗಿ ಆಯ್ಕೆ
ಕೊಲಂಬೊ : ಯುನೈಟೆಡ್ ನ್ಯಾಷನಲ್ ಪಾರ್ಟಿ ( ಯುಎನ್ಪಿ) ನಾಯಕ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಪ್ರಧಾನಿಯಾದ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ಗೊಟಾಬಯ ರಾಜಪಕ್ಸ ಅವರು ಪ್ರಮಾಣ ವಚನವನ್ನು ಬೋಧಿಸಿದ್ದಾರೆ.
ರಾನಿಲ್ ಹೀಗಾಗಲೇ ಐದು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದು, ಶ್ರೀಲಂಕಾದ ಪೊದುಜನ ಪೆರಮುನಾ (ಎಸ್ಎಲ್ಪಿಪಿ) ಸಂಸದರ ಬೆಂಬಲವನ್ನು ಪಡೆದು ವಿಕ್ರಮ್ ಸಿಂಘೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ.