ಮೈಸೂರು: ಪ್ರಸಿದ್ಧ ವ್ಯಕ್ತಿಯೊಬ್ಬರ ಫಾರ್ಮ್‌ ಹೌಸ್‍ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ!

ಮೈಸೂರು: ಇಲ್ಲಿನ ತಿ.ನರಸೀಪುರ ರಸ್ತೆ ಬಳಿಯ ಪ್ರಸಿದ್ಧ ವ್ಯಕ್ತಿಯೊಬ್ಬರ ಫಾರ್ಮ್‍ ಹೌಸ್‍ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಗುರುವಾರ ಯುವಕನು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಬಾಲಕಿಯ ಪೋಷಕರು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

× Chat with us