ಮೈಷುಗರ್ ಉಳಿವು: 2ನೇ ದಿನಕ್ಕೆ ಕಾಲಿಟ್ಟ ಧರಣಿ

ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ನಡೆಸುವಂತೆ ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಸರ್ ಎಂ.ವಿ. ಪ್ರತಿಮೆ ಎದುರು ನಡೆಯುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಕೆಪಿಸಿಸಿ ವಕ್ತಾರ ಎನ್. ಚಲುವರಾಯಸ್ವಾಮಿ ಸೇರಿದಂತೆ ಇತರರು ಧರಣಿ ಬೆಂಬಲಿಸಿರುವುದು ಪ್ರತಿಭಟನೆ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ.

 

ಎನ್. ಚಲುವರಾಯಸ್ವಾಮಿ ಮಾತನಾಡಿ, ಕಳೆದ ಕೆಲ ವರ್ಷಗಳಿಂದ ಮೈಷುಗರ್ ಸ್ಥಗಿತಗೊಂಡಿದ್ದರೂ ಜಿಲ್ಲೆಯಿಂದ ಆಯ್ಕೆಯಾಗಿರುವ ಜನಪ್ರತಿನಿಗಳು ಮೌನ ವಹಿಸಿದ್ದಾರೆ. ಸರ್ಕಾರಿ ಸ್ವಾಮ್ಯದಲ್ಲಿರುವ ಸಕ್ಕರೆ ಕಾರ್ಖಾನೆ ಆರಂಭಿಸುವಂತೆ ಏಕೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿಲ್ಲ ಎಂದು ಪ್ರಶ್ನಿಸಿದರು.

 

ಜಿಲ್ಲೆಯಿಂದ ಸುಮಾರು ೧೦ ಮಂದಿ ಶಾಸಕರು ಆಯ್ಕೆಯಾಗಿದ್ದಾರೆ. ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆಯಾಗಿರುವ ಮೈಷುಗರ್ ೨೦೦೪ರಲ್ಲಿ ನಡೆಯುತ್ತಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಕಾರ್ಖಾನೆ ಸ್ಥಗಿತವಾಗಿರಲಿಲ್ಲ ಎಂದು ತಿಳಿಸಿದರು.

 

ಮಂಡ್ಯದವರೇ ಆದ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿದ್ದರೂ ಮೈಷುಗರ್ ಕಾರ್ಖಾನೆಯನ್ನು ಆರಂಭಿಸದೆ ರೈತರನ್ನು ವಂಚಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಬಿಜೆಪಿ ನೇತೃತ್ವದ ಸರ್ಕಾರ ಮೈಷುಗರ್ ಕಾರ್ಖಾನೆಯನ್ನು ತಕ್ಷಣ ಆರಂಭಿಸಬೇಕು. ಅವರು ಆರಂಭಿಸಲಿ, ಬಿಡಲಿ ನಾವು ಅಕಾರಕ್ಕೆ ಬಂದಲ್ಲಿ ಮೈಷುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಆರಂಭಿಸುವುದಾಗಿ ಭರವಸೆ ನೀಡಿದರು.

 

ಜಿಲ್ಲೆಯ ಜನಪ್ರತಿನಿಗಳು ಇನ್ನಾದರೂ ಸದನದಲ್ಲಿ ಮೈಷುಗರ್ ಬಗ್ಗೆ ಪ್ರಸ್ತಾಪ ಮಾಡಬೇಕು. ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಆರಂಭಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇಲ್ಲದಿದ್ದರೆ ಆಯ್ಕೆಯಾಗಿಯೂ ಜಿಲ್ಲೆಯ ಜನರಿಗೆ ದ್ರೋಹ ಮಾಡಿದಂತಾಗುತ್ತದೆ ಎಂದು ಹೇಳಿದರು.

 

ಮಾಜಿ ಶಾಸಕ ರಮೇಶ್ ಬಂಡಿಸಿzಗೌಡ, ರೈತ ಮುಖಂಡರಾದ ಸುನಂದಾ ಜಯರಾಂ, ಕೆ. ಬೋರಯ್ಯ, ಇಂಡುವಾಳು ಚಂದ್ರಶೇಖರ್, ಸಿ.ಡಿ. ಗಂಗಾಧರ್, ಎಂ.ಡಿ. ಜಯರಾಂ, ಸಿದ್ದರಾಮೇಗೌಡ, ಅಪ್ಪಾಜಿಗೌಡ, ಪ್ರೊ. ಜಿ.ಟಿ.ವೀರಪ್ಪ, ಸೌಭಾಗ್ಯ, ದೇವಿ, ಸಿ.ಕುಮಾರಿ, ನಗರಸಭಾ ಸದಸ್ಯರಾದ ಶ್ರೀಧರ್, ನಹೀಂ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

× Chat with us