Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಆಧಾರ್ ಜೊತೆ ಪಾನ್‌ ಲಿಂಕ್‌ ಮಾಡದಿದ್ದಲ್ಲಿ ಪಾನ್ ಕಾರ್ಡ್ ನಿಷ್ಕ್ರಿಯ!

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಯ್ದೆ ೧೯೬೧ರ ಅನ್ವಯ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ೨೦೨೩ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ಏಪ್ರಿಲ್ ೧ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಈಗಾಗಲೇ ಹಲವು ಬಾರಿ ಗಡುವು ವಿಸ್ತರಿಸಲಾಗಿದ್ದರೂ ಈವರೆಗೆ ಬಹಳಷ್ಟು ಮಂದಿ ತಮ್ಮ ಪಾನ್ ಕಾರ್ಡ್‌ಗಳನ್ನು ಆಧಾರ್ ಜೊತೆ ಲಿಂಕ್ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ.
ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ರೂಪಾಯಿ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದ್ದು, ಒಂದು ವೇಳೆ ಇದನ್ನು ಸಹ ಸದುಪಯೋಗಪಡಿಸಿಕೊಳ್ಳದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವುದು ಖಚಿತವಾಗಿದೆ. ಪಾನ್ ಕಾರ್ಡ್ ನಿಷ್ಕ್ರಿಯವಾದರೆ ಬ್ಯಾಂಕ್ ಖಾತೆ ವಹಿವಾಟು ನಡೆಸುವುದೂ ಸೇರಿದಂತೆ ಹಲವು ಕಾರ್ಯಗಳಿಗೆ ತೊಂದರೆಯಾಗಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!