ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಯ್ದೆ ೧೯೬೧ರ ಅನ್ವಯ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ೨೦೨೩ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ಏಪ್ರಿಲ್ ೧ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಈಗಾಗಲೇ ಹಲವು ಬಾರಿ ಗಡುವು ವಿಸ್ತರಿಸಲಾಗಿದ್ದರೂ ಈವರೆಗೆ ಬಹಳಷ್ಟು ಮಂದಿ ತಮ್ಮ ಪಾನ್ ಕಾರ್ಡ್‌ಗಳನ್ನು ಆಧಾರ್ ಜೊತೆ ಲಿಂಕ್ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ.
ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ರೂಪಾಯಿ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದ್ದು, ಒಂದು ವೇಳೆ ಇದನ್ನು ಸಹ ಸದುಪಯೋಗಪಡಿಸಿಕೊಳ್ಳದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವುದು ಖಚಿತವಾಗಿದೆ. ಪಾನ್ ಕಾರ್ಡ್ ನಿಷ್ಕ್ರಿಯವಾದರೆ ಬ್ಯಾಂಕ್ ಖಾತೆ ವಹಿವಾಟು ನಡೆಸುವುದೂ ಸೇರಿದಂತೆ ಹಲವು ಕಾರ್ಯಗಳಿಗೆ ತೊಂದರೆಯಾಗಲಿದೆ.
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…
ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…