ವಿಜ್ಞಾನ ತಂತ್ರಜ್ಞಾನ

ಎರಡು ನೂತನ ಪ್ಲಾನ್‌ ಪರಿಚಯಿಸಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್‌ ನೀಡಿದ ಬಿಎಸ್‌ಎನ್‌ಎಲ್‌

ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್​ಎಮ್​ಎಸ್ ಉಚಿತವಿದೆ. 269 ರೂ. ಪ್ಲಾನ್​ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್​ಎನ್​ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.

ಬಿಎಸ್‌ಎನ್ಎಲ್‌ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್‌ಗಳನ್ನು ಪರಿಗಣಿಸುವುದಾದರೆ 1499 ರೂ. ಬೆಲೆಯ ವಾರ್ಷಿಕ ಪ್ಲಾನ್‌ ಗಮನ ಸೆಳೆದಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್‌ಎಲ್‌ 1999ರೂ. ಬೆಲೆಯ ವಾರ್ಷಿಕ ಪ್ಲಾನ್‌ ಹೊಂದಿದೆ. ಈ ಪ್ಲಾನ್‌ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.

andolana

Share
Published by
andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago