ನವದೆಹಲಿ : ಚಂದ್ರ ಮತ್ತು ಮಂಗಳ ಗ್ರಹಕ್ಕೆ ತೆರಳಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಶುಕ್ರ ಗ್ರಹದ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಜಪಾನ್ ದೇಶದ ಸಹಯೋಗದೊಂದಿಗೆ ಚಂದ್ರನ ಕಪ್ಪು ಭಾಗವನ್ನು ಅನ್ವೇಷಿಸಲು ಇಸ್ರೋ ಯೋಚಿಸಿದೆ. ಆಕಾಶ್ ತತ್ವ ಸಮ್ಮೇಳನದಲ್ಲಿ ಇಸ್ರೋದ ಭವಿಷ್ಯದ ಕಾರ್ಯಗಳ ಕುರಿತು ಪ್ರಸ್ತುತಿ ಮಾಡಿದ ಅಹಮದಾಬಾದ್ ಮೂಲದ ಭೌತಿಕ ಸಂಶೋಧನಾ ಪ್ರಯೋಗಾಲಯದ ನಿರ್ದೇಶಕ ಅನಿಲ್ ಭಾರದ್ವಾಜ್, ಇಸ್ರೋ ಮಂಗಳ ಗ್ರಹಕ್ಕೆ ಪುನಃ ಉಪಗ್ರಹವನ್ನು ಕಳುಹಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
ಚಂದ್ರನಲ್ಲಿರುವ ಶಾಶ್ವತ ನೆರಳಿನಂತಹ ಪ್ರದೇಶವನ್ನು ಅನ್ವೇಷಣೆ ಮಾಡಲು ಲೂನಾರ್ ರೋವರ್ ಅನ್ನು ಕಳುಹಿಸಲು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಷನ್ ಏಜೆನ್ಸಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅನಿಲ್ ಭಾರದ್ವಾಜ್ ಹೇಳಿದ್ದಾರೆ. ಸದ್ಯದ ಯೋಜನೆಗಳ ಪ್ರಕಾರ, ಇಸ್ರೋ ನಿರ್ಮಿಸಿದ ಚಂದ್ರನ ಲ್ಯಾಂಡರ್ ಮತ್ತು ರೋವರ್ ಅನ್ನು ಜಪಾನಿನ ರಾಕೆಟ್ ಮೂಲಕ ಚಂದ್ರನ ದಕ್ಷಿಣ ಧ್ರುವದ ಬಳಿ ಯೋಜಿತ ಲ್ಯಾಂಡಿಂಗ್ ಮೂಲಕ ಕಕ್ಷೆಗೆ ಸೇರಿಸಲಾಗುತ್ತದೆ.
ಆ ರೋವರ್ ನಂತರ ಸೂರ್ಯನ ಬೆಳಕು ಬೀಳದ ಚಂದ್ರನ ಶಾಶ್ವತ ನೆರಳಿನಂತಹ ಪ್ರದೇಶಕ್ಕೆ ಪ್ರಯಾಣಿಸುತ್ತದೆ. ಆದಿತ್ಯ L-1 ಒಂದು ವಿಶಿಷ್ಟವಾದ ಮಿಷನ್ ಆಗಿದ್ದು, ಇದರಲ್ಲಿ ಪೇಲೋಡ್ ಅನ್ನು ಹೊತ್ತ 400-ಕೆಜಿ ವರ್ಗದ ಉಪಗ್ರಹವನ್ನು ಸೂರ್ಯನ ಸುತ್ತ ಕಕ್ಷೆಯಲ್ಲಿ ಇರಿಸಲಾಗುವುದು. ಮುಂದಿನ ವರ್ಷದ ಆರಂಭದಲ್ಲಿ ಆದಿತ್ಯ ಎಲ್-1 ಮತ್ತು ಚಂದ್ರಯಾನ-3 ಮಿಷನ್‌ಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅನಿಲ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ.
ಇದರ ಜೊತೆಗೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ. ಅಬಾರ್ಟ್ ಮಿಷನ್ ಯಶಸ್ವಿಯಾಗಿ ನಡೆಸಿದ ಬಳಿಕ 2024 ರ ಕೊನೆಯ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಕಕ್ಷೆಗೆ ಹಾರಿಸಲು ಇಸ್ರೋ ಯೋಜಿಸಿದೆ. 2019ರಲ್ಲಿ ಕೈಗೊಳ್ಳಲಾಗಿದ್ದ ಚಂದ್ರಯಾನ -2 ಕಾರ್ಯಾಚರಣೆಯಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೊನೇ ಕ್ಷಣದಲ್ಲಿ ವಿಫಲವಾಗಿತ್ತು. ಚಂದ್ರಯಾನ 3 ಇದೀಗ ಸಜ್ಜಾಗಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ. ಮುಂದಿನ ವರ್ಷದ ಆರಂಭದಲ್ಲಿ ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ ಯಾನಕ್ಕಾಗಿ ಅಬಾರ್ಟ್ ಮಿಷನ್ ನ ಮೊದಲ ಪರೀಕ್ಷಾರ್ಥ ಹಾರಾಟ ಮಾಡಲಾಗುತ್ತಿದೆ.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…