ವಾಷಿಂಗ್ಟನ್: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪಟ್ಟಿಗೆ ಇದೀಗ ಮೈಕ್ರೋಸಾಫ್ಟ್ ಕೂಡ ಸೇರಿಕೊಂಡಿದೆ. ಟೆಕ್ ದೈತ್ಯ ಸಂಸ್ಥೆಯು ತನ್ನ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮೈಕ್ರೋಸಾಫ್ಟ್ ತಮ್ಮ ಸಂಸ್ಥೆಯಲ್ಲಿ ಸರಿಸುಮಾರು ಶೇ 5ರಷ್ಟು ಅಥವಾ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಬುಧವಾರ ಸಾವಿರಾರು ಜನರು ಕೆಲಸ ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ. ಅಮೆರಿಕದ ತಂತ್ರಜ್ಞಾನ ವಲಯದಲ್ಲಿ ನಡೆಯುತ್ತಿರುವ ಹೊಸ ಉದ್ಯೋಗ ವಜಾ ಪ್ರಕರಣವಿದು. ಈಗಾಗಲೇ ಅಮೆಜಾನ್, ಮೆಟಾದಂತಹ ಸಂಸ್ಥೆಗಳು ಬೇಡಿಕೆ ಕುಗ್ಗುವಿಕೆ ಮತ್ತು ಜಾಗತಿಕ ಆರ್ಥಿಕತೆ ಕುಸಿತದಿಂದಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಪ್ರಕ್ರಿಯೆ ಅನಿವಾರ್ಯವಾಗಿದೆ ಎಂದು ಪ್ರಕಟಿಸಿ, ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದವು.
ಮಾರುಕಟ್ಟೆ ಕುಸಿತ: ಜೂನ್ 30ರ ವರದಿ ಅನುಸಾರ, ಮೈಕ್ರೋಸಾಫ್ಟ್ ಸಂಸ್ಥೆಯಲ್ಲಿ 221,000 ಮಂದಿ ಪೂರ್ಣ ಪ್ರಮಾಣದ ಉದ್ಯೋಗಿಗಳಿದ್ದಾರೆ. ಇದರಲ್ಲಿ ಅಮೆರಿಕದಲ್ಲಿ 122,000 ಮಂದಿ ಕಾರ್ಯ ನಿರ್ವಹಿಸುತ್ತಿದ್ದರೆ, 99,000 ಮಂದಿ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗಿಗಳಾಗಿದ್ದಾರೆ. ಮೈಕ್ರೋಸಾಫ್ಟ್ ತಮ್ಮ ಕ್ಲೌಡ್ ಯೂನಿಟ್ ಅಜುರ್ ಬೆಳವಣಿಗೆ ನಿರ್ವಹಣೆ ಒತ್ತಡದಲ್ಲಿ ಸಿಲುಕಿದೆ. ಅಲ್ಲದೇ, ಮಾರುಕಟ್ಟೆಯ ಕ್ವಾರ್ಟರ್ನಲ್ಲಿ ಕುಸಿತದ ನಂತರ ವಿಂಡೋಸ್ ಮತ್ತು ಸಾಧನಗಳ ಮಾರಾಟ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಅನಿವಾರ್ಯವಾಗಿದೆ ಎನ್ನಲಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…