ವಿಜ್ಞಾನ ತಂತ್ರಜ್ಞಾನ

ಒಂದೇ ವಾಟ್ಸ್​ಆ್ಯಪ್​ನಲ್ಲಿ ಅನೇಕ ಅಕೌಂಟ್ : ಹೊಸ ಪ್ರಯೋಗಕ್ಕೆ ಮುಂದಾದ ಮೆಟಾ

ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ.

ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ. ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

ಈ ವೈಶಿಷ್ಟ್ಯವು ಬಳಕೆದಾರರಿಗೆ ಬಹು ಖಾತೆಗಳನ್ನು ನಿರ್ವಹಿಸುವ ಅನುಕೂಲವನ್ನು ಒದಗಿಸುವುದಲ್ಲದೆ, ಒಂದೇ ಅಪ್ಲಿಕೇಶನ್‌ನಲ್ಲಿ ಖಾಸಗಿ ಚಾಟ್‌ಗಳು, ಕೆಲಸದ ಸಂಭಾಷಣೆಗಳು ಮತ್ತು ಇತರ ಸಂದೇಶಗಳಿಗೆ ಸಹಾಯ ಮಾಡುತ್ತದೆ.

lokesh

Share
Published by
lokesh

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

1 hour ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago