ವಿಜ್ಞಾನ ತಂತ್ರಜ್ಞಾನ

ಆನ್‌ಲೈನ್ RTI ಪೋರ್ಟಲ್ ಆರಂಭಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರಿಂ ಕೋರ್ಟ್‌ ಗುರುವಾರದಿಂದ ತನ್ನ ಆನ್‌ಲೈನ್‌ ಮಾಹಿತಿ ಹಕ್ಕು ಪೋರ್ಟಲ್‌ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಬೆಳಗ್ಗೆ 10:30 ಕ್ಕೆ ವಿಚಾರಣೆ ಪ್ರಾರಂಭಿಸುವ ಮೊದಲು, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಆನ್‌ಲೈನ್ ಆರ್‌ಟಿಐ ಪೋರ್ಟಲ್ ಇನ್ನು ಕೆಲ ಹೊತ್ತಿನಲ್ಲಿ ಸಕ್ರಿಯವಾಗಲಿದೆ ಎಂದು ಘೋಷಿಸಿದರು. ತಾತ್ಕಾಲಿಕ ಸಮಸ್ಯೆಗಳಿದ್ದಲ್ಲಿ ನಾವು ಅದನ್ನು ಪರಿಶೀಲಿಸಿ ಸರಿಪಡಿಸುತ್ತೇವೆ” ಎಂದು ಅವರು ಸ್ಪಷ್ಟಪಡಿಸಿದರು. ಕಳೆದ ಮಂಗಳವಾರ ಪೋರ್ಟಲ್‌ನ ಪರೀಕ್ಷಾರ್ಥ ಆವೃತ್ತಿಯನ್ನು ನ್ಯಾಯಾಲಯ ಸಕ್ರಿಯಗೊಳಿಸಿತ್ತು.

ಆರ್‌ಟಿಐ ಅರ್ಜಿ, ಪ್ರಥಮ ಮೇಲ್ಮನವಿಗಳನ್ನು ಸಲ್ಲಿಸಲು ಮತ್ತು ಪ್ರತಿ ಮಾಡಿಕೊಳ್ಳುವ ಶುಲ್ಕ, ಇತ್ಯಾದಿಗಳಿಗೆ ಪಾವತಿ ಮಾಡಲು ಇದನ್ನು ಬಳಸಬಹುದಾಗಿದ್ದು ಭಾರತೀಯ ನಾಗರಿಕರಿಗೆ ಮಾತ್ರ ಈ ಸಂಬಂಧ ಅವಕಾಶ ಕಲ್ಪಿಸಲಾಗಿದೆ.

ಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಅಥವಾ ಯುಪಿಐನ ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.ಪ್ರತಿ ಆರ್‌ಟಿಐ ಅರ್ಜಿ ಶುಲ್ಕ ₹10.
ಇದಕ್ಕೂ ಮುನ್ನ, ಸುಪ್ರೀಂ ಕೋರ್ಟ್‌ಗೆ ಸಂಬಂಧಿಸಿದಂತೆ ಆರ್‌ಟಿಐ ಅರ್ಜಿಗಳನ್ನು ಭೌತಿಕವಾಗಿ ಸಲ್ಲಿಸಬೇಕಾಗಿತ್ತು.ನ್ಯಾಯಾಲಯಕ್ಕೆ ಆನ್‌ಲೈನ್‌ ಆರ್‌ಟಿಐ ಪೋರ್ಟಲ್‌ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಹಿಂದೆ ವಿವಿಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು (ಪಿಐಎಲ್) ಸಲ್ಲಿಸಲಾಗಿತ್ತು.

ಕಳೆದ ವಾರ ಅಂತಹ ಒಂದು ಮನವಿಯ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರಿದ್ದ ಪೀಠ ಶೀಘ್ರದಲ್ಲೇ ಪೋರ್ಟಲ್‌ಗೆ ಚಾಲನೆ ನೀಡಲಾಗುವುದು ಎಂದು ಹೇಳಿತ್ತು.

andolanait

Share
Published by
andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

11 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

11 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

13 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

14 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

14 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

18 hours ago