ನವದೆಹಲಿ: ‘ವಾಟ್ಸ್‌ಆ್ಯಪ್ ಪೇ’ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಡ್ತಿ ಪಡೆದ ನಾಲ್ಕೇ ತಿಂಗಳಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನವೆಂಬರ್‌ನಲ್ಲಿ ಮೆಟಾ ಕಂಪನಿಯ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಪದ ತ್ಯಾಗದ ಬಳಿಕ ಒಂದೂವರೆ ತಿಂಗಳಲ್ಲಿ ಆದ ನಾಲ್ಕನೇ ಉನ್ನತ ಹುದ್ದೆಯ ರಾಜೀನಾಮೆ ಇದಾಗಿದೆ.
ಮೋಹನ್ ರಾಜೀನಾಮೆ ಬಳಿಕ ವಾಟ್ಸ್‌ಆ್ಯಪ್ ಇಂಡಿಯಾ ಮುಖ್ಯಸ್ಥರಾಗಿದ್ದ ಅಭಿಜಿತ್ ಬೋಸ್, ಮೆಟಾ ಇಂಡಿಯಾ ಪಬ್ಲಿಕ್ ಪಾಲಿಸಿ ಮುಖ್ಯಸ್ಥ ರಾಜೀವ್ ಅಗರ್‌ವಾಲ್ ಸಹ ರಾಜೀನಾಮೆ ಸಲ್ಲಿಸಿದ್ದರು. ವಾಟ್ಸ್‌ಆ್ಯಪ್ ಕಂಪನಿಯಿಂದ ಹೊರಬರುತ್ತಿರುವ ಮಾಹಿತಿಯನ್ನು ಚೊಲೆಟ್ಟಿ, ಲಿಂಕ್ಡ್ಇನ್‌ನಲ್ಲಿ ಹಂಚಿಕೊಂಡಿದ್ದಾರೆ.
‘ಇಂದು ವಾಟ್ಸ್‌ಆ್ಯಪ್ ಪೇನಲ್ಲಿ ನನ್ನ ಕೊನೆಯ ದಿನವಾಗಿತ್ತು. ಭಾರತದಲ್ಲಿ ವಾಟ್ಸ್‌ಆ್ಯಪ್ ಪ್ರಭಾವ ಮತ್ತು ಅದರ ವ್ಯಾಪ್ತಿ ನೋಡಿದ್ದು ಉತ್ತಮ ಅನುಭವವಾಗಿದೆ’ ಎಂದು ಬುಧವಾರ ಮಾಡಿರುವ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಕ್ಟೋಬರ್ 2021ರಂದು ಚೊಲೆಟ್ಟಿ ಅಮೇಜಾನ್ ಬಿಟ್ಟು ವಾಟ್ಸ್‌ಆ್ಯಪ್ ಸೇರಿದ್ದರು.
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…