ವಿಜ್ಞಾನ ತಂತ್ರಜ್ಞಾನ

ಸೆಪ್ಟೆಂಬರ್‌ ತಿಂಗಳಲ್ಲಿ ಭಾರತದ 26.85 ಲಕ್ಷ ವಾಟ್ಸಪ್‌ ಖಾತೆಗಳಿಗೆ ನಿರ್ಬಂಧ

ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ 26.85 ಲಕ್ಷ ವಾಟ್ಸಪ್‌ ಖಾತೆಗಳನ್ನು ನಿರ್ಬಂಧಿಸಲಾಗಿದೆ

ನವದೆಹಲಿ: ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ಬಳಕೆದಾರರು ಫ್ಲ್ಯಾಗ್ ಮಾಡುವ ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿದೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್‌ನಲ್ಲಿ ನಿಷೇಧಿಸಲಾದ 23.28 ಲಕ್ಷ ಖಾತೆಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ನಿರ್ಬಂಧಿಸಲಾದ ಖಾತೆಗಳ ಸಂಖ್ಯೆ 15 ಪ್ರತಿಶತ ಹೆಚ್ಚಾಗಿದೆ ಎಂದು ಹೇಳಿದೆ.
1 ಸೆಪ್ಟೆಂಬರ್, 2022 ಮತ್ತು 30 ಸೆಪ್ಟೆಂಬರ್, 2022 ರ ನಡುವೆ 26,85,000 ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಇದರಲ್ಲಿ 8,72,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಬರುವ ಮೊದಲೇ ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ. ಭಾರತೀಯ ಖಾತೆಗಳನ್ನು +91 ಫೋನ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ವಾಟ್ಸ್​ಆ್ಯಪ್ ತನ್ನ ಸೆಪ್ಟೆಂಬರ್ ತಿಂಗಳ ಯೂಸರ್ ಸೇಫ್ಟಿ ರಿಪೋರ್ಟ್​ನಲ್ಲಿ ತಿಳಿಸಿದೆ.ಕಳೆದ ವರ್ಷ ಜಾರಿಗೆ ಬಂದ ಕಠಿಣ ಐಟಿ ನಿಯಮಾವಳಿಗಳ ಪ್ರಕಾರ, ಬೃಹತ್ ಗಾತ್ರದ ಡಿಜಿಟಲ್ ಕಂಪನಿಗಳು (50 ಲಕ್ಷಕ್ಕೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ತಮಗೆ ಬಂದ ದೂರುಗಳು ಮತ್ತು ಅವುಗಳ ಮೇಲೆ ಕ್ರಮ ತೆಗೆದುಕೊಂಡ ಬಗ್ಗೆ ಅನುಸರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದು ಕಡ್ಡಾಯವಾಗಿದೆ.

ದೊಡ್ಡ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ದ್ವೇಷದ ಭಾಷಣ, ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಕಾರಣದಿಂದ ತೀವ್ರ ಟೀಕೆಗೊಳಗಾಗಿದ್ದವು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಕಂಟೆಂಟ್ ತೆಗೆದು ಹಾಕುವಲ್ಲಿ ಮತ್ತು ಬಳಕೆದಾರರನ್ನು ನಿಷೇಧಿಸುವಲ್ಲಿ ನಿರಂಕುಶವಾಗಿ ಬೇಕಾಬಿಟ್ಟಿಯಾಗಿ ವರ್ತಿಸುತ್ತಿವೆ ಎಂದು ಬಹುದೊಡ್ಡ ಸಂಖ್ಯೆಯ ಬಳಕೆದಾರರು ಆರೋಪಿಸಿದ್ದಾರೆ

ದೊಡ್ಡ ಟೆಕ್ ಕಂಪನಿಗಳ ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಕ್ರಿಯತೆ ಅಥವಾ ಟೇಕ್‌ಡೌನ್ ನಿರ್ಧಾರಗಳ ವಿರುದ್ಧ ಕುಂದುಕೊರತೆ ಮೇಲ್ಮನವಿ ಕಾರ್ಯವಿಧಾನವನ್ನು ಸ್ಥಾಪಿಸಲು ಸರ್ಕಾರವು ಕಳೆದ ವಾರ ನಿಯಮಗಳನ್ನು ಪ್ರಕಟಿಸಿತ್ತು. ಇತ್ತೀಚಿನ ವಾಟ್ಸ್​ಆ್ಯಪ್ ವರದಿಯ ಪ್ರಕಾರ, ಅದು ಸೆಪ್ಟೆಂಬರ್‌ನಲ್ಲಿ 666 ದೂರುಗಳನ್ನು ಸ್ವೀಕರಿಸಿದೆ ಮತ್ತು 23 ದೂರುಗಳ ವಿಚಾರದಲ್ಲಿ ಮಾತ್ರ ಕ್ರಮ ಕೈಗೊಂಡಿದೆ

andolanait

Share
Published by
andolanait
Tags: ಭಾರತ

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

4 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

5 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

5 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

5 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

6 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

6 hours ago