ವಿಜ್ಞಾನ ತಂತ್ರಜ್ಞಾನ

ವಾಟ್ಸ್‌ಆ‍್ಯಪ್‌ ಪರಿಚಯಿಸಿದೆ ವಿನೂತನ ಕಮ್ಯೂನಿಟಿ ಫೀಚರ್ಸ್‌ : ಇಲ್ಲಿದ ಸಂಪೂರ್ಣ ಮಾಹಿತಿ

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ.

ವಾಟ್ಸ್​ಆ್ಯಪ್​ ಕಮ್ಯೂನಿಟಿಗಳು ಜನರಿಗೆ ಕೆಲಸ ಮಾಡುವ ರಚನೆಯೊಂದಿಗೆ ಪ್ರತ್ಯೇಕ ಗುಂಪುಗಳನ್ನು ಒಂದೇ ಸೂರಿನಡಿಯಲ್ಲಿ ತರಲು ಅನುವು ಮಾಡಿಕೊಡುತ್ತದೆ. ಇದೇ ರೀತಿಯಲ್ಲಿ ಕಮ್ಯೂನಿಟಿ ಕಳುಹಿಸುವ ಕಂಪ್ಲೀಟ್‌ ಅಪ್ಡೇಟ್‌ಗಳನ್ನು ಜನರು ಸ್ವೀಕರಿಸಬಹುದು. ಜೊತೆಗೆ ಕಮ್ಯೂನಿಟಿ ಗ್ರೂಪ್‌ನಲ್ಲಿ ಮುಖ್ಯವಾದವುಗಳ ಕುರಿತು ಸಣ್ಣ ಚರ್ಚಾ ಗುಂಪುಗಳನ್ನು ಸುಲಭವಾಗಿ ಸಂಘಟಿಸಬಹುದು. ಇದರಲ್ಲಿ, ಅನೇಕ ಗುಂಪುಗಳನ್ನು ಏಕಕಾಲದಲ್ಲಿ ಸೇರಿಸಬಹುದು ಮತ್ತು ನೀವು ಎಲ್ಲಾ ಗುಂಪುಗಳ ನವೀಕರಣಗಳನ್ನು ಒಂದೇ ಸ್ಥಳದಲ್ಲಿ ಪಡೆಯುತ್ತೀರಿ.

ಉದಾಹರಣೆಗೆ, ಶಾಲಾ ಮಕ್ಕಳು ಕಡ್ಡಾಯವಾಗಿ ಓದಬೇಕಾದ ವಿಷಯಗಳನ್ನು ಹಂಚಿಕೊಳ್ಳಲು ಎಲ್ಲಾ ಪೋಷಕರನ್ನು ಒಟ್ಟಿಗೆ ಸೇರಿಸಬಹುದು ಮತ್ತು ನಿರ್ದಿಷ್ಟ ತರಗತಿಗಳು, ಪಠ್ಯೇತರ ಚಟುವಟಿಕೆಗಳು ಅಥವಾ ಸ್ವಯಂಸೇವಕ ಅಗತ್ಯಗಳ ಬಗ್ಗೆ ಗುಂಪುಗಳನ್ನು ಹೊಂದಿಸಬಹುದಾಗಿದೆ. ಈ ಗುಂಪುಗಳು ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ಗಳಾಗಿ ಕಾರ್ಯನಿರ್ವಹಿಸಲಿವೆ. ವಾಟ್ಸ್​ಆ್ಯಪ್​ನಲ್ಲಿನ ಪ್ರತಿಯೊಂದು ಕಮ್ಯೂನಿಟಿ ಗುಂಪುಗಳ ವಿವರಣೆ ಮತ್ತು ಮೆನುವನ್ನು ಹೊಂದಿರುತ್ತದೆ. ಅಲ್ಲದೆ ನೀವು ಯಾವ ಜನರು ಕಮ್ಯೂನಿಟಿ ಸೇರಬಹುದು ಅನ್ನೊದನ್ನ ಆಯ್ಕೆ ಮಾಡಬಹುದು.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಈ ಹೊಸ ಫೀಚರ್​ನಲ್ಲಿ ಇರುವ ಸಂದೇಶಗಳು ಎಂಡ್‌ ಟು ಎಂಡ್‌ ಎನ್‌ಕ್ರಿಪ್ಶನ್ ಅನ್ನು ಸಹ ಪಡೆಯುತ್ತವೆ. ಇದಲ್ಲದೆ, ಈಗಾಗಲೇ ಹೇಳಿರುವಂತೆ ಬಳಕೆದಾರರ ಪ್ರೈವೆಸಿಯನ್ನು ರಕ್ಷಿಸಲು ವಾಟ್ಸ್​ಆ್ಯಪ್​ ಕಮ್ಯೂನಿಟಿ ಫೋನ್ ಸಂಖ್ಯೆಗಳನ್ನು ಹೈಡ್‌ ಮಾಡುತ್ತದೆ. ಟೆಲಿಗ್ರಾಮ್ ಚಾನೆಲ್‌ಗಳ ಮಾದರಿಯಲ್ಲಿ ವಾಟ್ಸ್​​ಆ್ಯಪ್ ಗ್ರೂಪಿನ ವಿಸ್ತಾರವನ್ನು ಮಿತಿಗೊಳಿಸುತ್ತದೆ.

andolana

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

5 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

5 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

9 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

9 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

9 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

9 hours ago