ವಿಜ್ಞಾನ ತಂತ್ರಜ್ಞಾನ

ವಾಟ್ಸ್‌ಆ‍್ಯಪ್‌ ಪರಿಚಯಿಸಿದೆ ವಿನೂತನ ಕಮ್ಯೂನಿಟಿ ಫೀಚರ್ಸ್‌ : ಇಲ್ಲಿದ ಸಂಪೂರ್ಣ ಮಾಹಿತಿ

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಪರಿಚಯಿಸಿದೆ. ಆಂಡ್ರಾಯ್ಡ್, ಐಒಎಸ್ ಮತ್ತು ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಈ ನೂತನ ಫೀಚರ್ಸ್ ಲಭ್ಯವಾಗುತ್ತಿದೆ. ಈ ಫೀಚರ್ ಅನ್ನು ಗ್ರೂಪ್‌ಗಳ ಗ್ರೂಪ್‌ ಎಂದು ಹೇಳಬಹುದು. ಅಂದರೆ ವಾಟ್ಸ್​ಆ್ಯಪ್​ನಲ್ಲಿ ಆಡ್ಮಿನ್‌ಗಳು ನಿರ್ದಿಷ್ಟ ಗುಂಪುಗಳಿಗೆ ಅಥವಾ ಇಡೀ ಸಮುದಾಯಕ್ಕೆ ವಿಚಾರವನ್ನು ಗುಂಪಿನ ಮೂಲಕ ಸಂದೇಶಗಳನ್ನು ಕಳುಹಿಸಲು ಸಾಧ್ಯವಾಗುತ್ತದೆ.

ವಾಟ್ಸ್​ಆ್ಯಪ್​ ಕಮ್ಯೂನಿಟಿಗಳು ಜನರಿಗೆ ಕೆಲಸ ಮಾಡುವ ರಚನೆಯೊಂದಿಗೆ ಪ್ರತ್ಯೇಕ ಗುಂಪುಗಳನ್ನು ಒಂದೇ ಸೂರಿನಡಿಯಲ್ಲಿ ತರಲು ಅನುವು ಮಾಡಿಕೊಡುತ್ತದೆ. ಇದೇ ರೀತಿಯಲ್ಲಿ ಕಮ್ಯೂನಿಟಿ ಕಳುಹಿಸುವ ಕಂಪ್ಲೀಟ್‌ ಅಪ್ಡೇಟ್‌ಗಳನ್ನು ಜನರು ಸ್ವೀಕರಿಸಬಹುದು. ಜೊತೆಗೆ ಕಮ್ಯೂನಿಟಿ ಗ್ರೂಪ್‌ನಲ್ಲಿ ಮುಖ್ಯವಾದವುಗಳ ಕುರಿತು ಸಣ್ಣ ಚರ್ಚಾ ಗುಂಪುಗಳನ್ನು ಸುಲಭವಾಗಿ ಸಂಘಟಿಸಬಹುದು. ಇದರಲ್ಲಿ, ಅನೇಕ ಗುಂಪುಗಳನ್ನು ಏಕಕಾಲದಲ್ಲಿ ಸೇರಿಸಬಹುದು ಮತ್ತು ನೀವು ಎಲ್ಲಾ ಗುಂಪುಗಳ ನವೀಕರಣಗಳನ್ನು ಒಂದೇ ಸ್ಥಳದಲ್ಲಿ ಪಡೆಯುತ್ತೀರಿ.

ಉದಾಹರಣೆಗೆ, ಶಾಲಾ ಮಕ್ಕಳು ಕಡ್ಡಾಯವಾಗಿ ಓದಬೇಕಾದ ವಿಷಯಗಳನ್ನು ಹಂಚಿಕೊಳ್ಳಲು ಎಲ್ಲಾ ಪೋಷಕರನ್ನು ಒಟ್ಟಿಗೆ ಸೇರಿಸಬಹುದು ಮತ್ತು ನಿರ್ದಿಷ್ಟ ತರಗತಿಗಳು, ಪಠ್ಯೇತರ ಚಟುವಟಿಕೆಗಳು ಅಥವಾ ಸ್ವಯಂಸೇವಕ ಅಗತ್ಯಗಳ ಬಗ್ಗೆ ಗುಂಪುಗಳನ್ನು ಹೊಂದಿಸಬಹುದಾಗಿದೆ. ಈ ಗುಂಪುಗಳು ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ಗಳಾಗಿ ಕಾರ್ಯನಿರ್ವಹಿಸಲಿವೆ. ವಾಟ್ಸ್​ಆ್ಯಪ್​ನಲ್ಲಿನ ಪ್ರತಿಯೊಂದು ಕಮ್ಯೂನಿಟಿ ಗುಂಪುಗಳ ವಿವರಣೆ ಮತ್ತು ಮೆನುವನ್ನು ಹೊಂದಿರುತ್ತದೆ. ಅಲ್ಲದೆ ನೀವು ಯಾವ ಜನರು ಕಮ್ಯೂನಿಟಿ ಸೇರಬಹುದು ಅನ್ನೊದನ್ನ ಆಯ್ಕೆ ಮಾಡಬಹುದು.

ನಿರ್ದಿಷ್ಟ ಉದ್ದೇಶಕ್ಕಾಗಿ ರಚಿಸಿಕೊಳ್ಳಬಹುದಾದ ಸಮುದಾಯದ ಗ್ರೂಪ್‌ನಲ್ಲಿ ಆಹ್ವಾನಿಸಲಾದ ಬಳಕೆದಾರರು ತಮ್ಮ ಆಸಕ್ತಿಗಳ ಆಧಾರದ ಮೇಲೆ ಯಾವ ಗ್ರೂಪ್ ಅನ್ನು ಸೇರಬೇಕೆಂದು ನಿರ್ಧರಿಸಬಹುದು. ಇದರಿಂದ ಇತರೆ ವಾಟ್ಸ್​ಆ್ಯಪ್ ಗ್ರೂಪ್‌ಗಳಂತೆ ಈ ಗ್ರೂಪ್‌ಗಳಲ್ಲಿ ಅನ್ಯ ವಿಷಯಗಳ ಬಗ್ಗೆ ಅರ್ಥವಿಲ್ಲದೆ ಚರ್ಚೆಗೆ ಅವಕಾಶವಿರುವುದಿಲ್ಲ. ಗೌಪ್ಯತೆಯ ಕಾರಣಗಳಿಗಾಗಿ ಗುಂಪುಗಳಲ್ಲಿನ ಸದಸ್ಯರ ಸಂಖ್ಯೆಯನ್ನು ಅಡ್ಮಿನ್ ಹೊರತಾಗಿ ಇತರರಿಗೆ ಕಾಣಿಸದೇ ಇರುವ ಹಾಗೆ ಈ ಗ್ರೂಪ್‌ಗಳ ಫೀಚರ್ ತರಲಾಗಿದೆ.

ಈ ಹೊಸ ಫೀಚರ್​ನಲ್ಲಿ ಇರುವ ಸಂದೇಶಗಳು ಎಂಡ್‌ ಟು ಎಂಡ್‌ ಎನ್‌ಕ್ರಿಪ್ಶನ್ ಅನ್ನು ಸಹ ಪಡೆಯುತ್ತವೆ. ಇದಲ್ಲದೆ, ಈಗಾಗಲೇ ಹೇಳಿರುವಂತೆ ಬಳಕೆದಾರರ ಪ್ರೈವೆಸಿಯನ್ನು ರಕ್ಷಿಸಲು ವಾಟ್ಸ್​ಆ್ಯಪ್​ ಕಮ್ಯೂನಿಟಿ ಫೋನ್ ಸಂಖ್ಯೆಗಳನ್ನು ಹೈಡ್‌ ಮಾಡುತ್ತದೆ. ಟೆಲಿಗ್ರಾಮ್ ಚಾನೆಲ್‌ಗಳ ಮಾದರಿಯಲ್ಲಿ ವಾಟ್ಸ್​​ಆ್ಯಪ್ ಗ್ರೂಪಿನ ವಿಸ್ತಾರವನ್ನು ಮಿತಿಗೊಳಿಸುತ್ತದೆ.

andolana

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

2 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

2 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

2 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

2 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

2 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

2 hours ago