ಬಿಎಸ್‌ವೈ ರಾಜೀನಾಮೆ: ಶಿಕಾರಿಪುರದಲ್ಲಿ ಅಂಗಡಿ-ಮುಂಗಟ್ಟು ಬಂದ್‌ ಮಾಡಿ ಜನರ ಆಕ್ರೋಶ

ಶಿವಮೊಗ್ಗ: ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಎಸ್‌ವೈ ಕ್ಷೇತ್ರ ಶಿಕಾರಿಪುರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಅಸಮಾಧಾನ ಹೊರಹಾಕಲಾಗಿದೆ.

ಯಡಿಯೂರಪ್ಪರನ್ನು ಕೆಳಗಿಳಿಸಿದ್ದಕ್ಕೆ ಕ್ಷೇತ್ರದ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕಾರಿಪುರದ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಬಿಎಸ್‌ವೈ ಇಲ್ಲದಿದ್ದರೆ ಬಿಜೆಪಿ ಸರ್ಕಾರ ಸರ್ವನಾಶವಾಗುತ್ತದೆ ಎಂದು ಕಿಡಿಕಾರಿದರು.

× Chat with us