ಕ್ರೀಡೆ

ʼನೀವು ಯಾವತ್ತೂ ನಮ್ಮ ಚಾಂಪಿಯನ್‌ʼ: ವಿನೇಶ್‌ ಕುರಿತು ಸಿಎಂ ಟ್ವೀಟ್‌

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಫೈನಲ್‌ನಲ್ಲಿ ಅನರ್ಹಗೊಂಡಿರುವ ವಿನೇಶಾ ಫೋಗಟ್‌ ಅವರಿಗೆ ಬೆಂಬಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್‌ ಮೂಲಕ ಸ್ಫೂರ್ತಿದಾಯಕ ಸಂದೇಶ ಹಂಚಿಕೊಂಡಿದ್ದಾರೆ.

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಅನರ್ಹಗೊಂಡಿರುವುದು ನಿಜಕ್ಕೂ ದುರದೃಷ್ಟಕರ. ಇದರಿಂದ ನನಗೆ ನೋವಾಗಿದೆ. ವಿನೇಶ್‌ ಅವರ ಸಾಮಾರ್ಥ್ಯ, ಹೋರಾಟ ಮತ್ತು ಸಮರ್ಪಣಾ ಭಾವು ದೇಶಕ್ಕೆ ಸದಾ ಸ್ಫೂರ್ತಿಯಾಗಿರಲಿದೆ ಎಂದು ಹೇಳಿದ್ದಾರೆ.

ಈ ಒಂದು ಕ್ಷಣದಿಂದಾಗಿ ನೀವು ದೇಶಕ್ಕಾಗಿ ಮಾಡಿದ ಅಪಾರ ಸಾಧನೆ ಹಾಗೂ ಹೆಮ್ಮೆಯನ್ನು ಕುಗ್ಗಿಸಲು ಸಾಧ್ಯವಿಲ್ಲ. ಧೈರ್ಯವಾಗಿರಿ ವಿನೇಶ್.‌ ನೀವು ಯಾವಾಗಲೂ ನಮ್ಮ ಚಾಂಪಿಯನ್‌ ಆಗಿರುತ್ತೀರಿ..! ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಬಗೆಹರಿಯದ ಬಿಜೆಪಿ ಬಣ ಹೋರಾಟ

ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…

7 mins ago

ಸದನದಲ್ಲಿ ವೈಯಕ್ತಿಕ ತೇಜೋವಧೆ ಸಲ್ಲದು; ಮಹಿಳಾ ಸದಸ್ಯರ ಬಗ್ಗೆ ಪ್ರತಿಕ್ರಿಯಿಸುವಾಗ ಎಚ್ಚರ ಬೇಕು

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…

13 mins ago

ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸು

ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್‌ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…

20 mins ago

ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…

2 hours ago

ಎಲ್ಲರ ಪಕ್ಕ ಕೂರುವ ಸಮಾನ ಹಕ್ಕು ನಮಗೆ ಬೇಕು

'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…

2 hours ago

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

2 hours ago