ಕ್ರೀಡೆ

ಐಪಿಎಲ್‌ 2024: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ರೋಚಕ ಜಯ

ಜೈಪುರ: ಇಲ್ಲಿನ ಸವಾಯಿ ಮಾನ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 24ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 3 ವಿಕೆಟ್‌ಗಳ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಫೀಲ್ಡಿಂಗ್ ಆಯ್ದುಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸಂಜು ಸಾಮ್ಸನ್ ಹಾಗೂ ರಿಯಾನ್ ಪರಾಗ್ ಅಬ್ಬರದ ಬ್ಯಾಟಿಂಗ್‌ನಿಂದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿ 197 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್‌ ಟೈಟನ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 199 ರನ್‌ ಕಲೆಹಾಕಿದೆ.

ರಾಜಸ್ಥಾನ್‌ ರಾಯಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್‌ ಹಾಗೂ ಜೋಸ್‌ ಬಟ್ಲರ್‌ ಕಣಕ್ಕಿಳಿದರು. ಜೈಸ್ವಾಲ್‌ 24 (19) ರನ್‌ ಗಳಿಸಿದರೆ, ಬಟ್ಲರ್‌ 8 (10) ರನ್‌ ಗಳಿಸಿ ನಿರ್ಗಮಿಸಿದರು. ಮೂರನೇ ವಿಕೆಟ್‌ಗೆ ಜತೆಯಾದ ಸಂಜು ಸಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ 130 ರನ್‌ಗಳ ಅಬ್ಬರದ ಜತೆಯಾಟವಾಡಿದರು. ರಿಯಾನ್‌ ಪರಾಗ್‌ 76 (48) ರನ್‌ ಬಾರಿಸಿ ಔಟ್‌ ಆದರೆ, ನಾಯಕ ಸಂಜು ಸಾಮ್ಸನ್‌ ಅಜೇಯ 68 (38) ರನ್‌ ಬಾರಿಸಿದರು ಮತ್ತು ಶಿಮ್ರಾನ್‌ ಹೆಟ್ಮೈರ್‌ ಅಜೇಯ 13 (5) ರನ್‌ ಕಲೆಹಾಕಿದರು.

ಗುಜರಾತ್‌ ಟೈಟನ್ಸ್‌ ಪರ ಮೋಹಿತ್‌ ಶರ್ಮಾ, ರಶೀದ್‌ ಖಾನ್‌ ಹಾಗೂ ಉಮೇಶ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ತಂಡದ ಪರ ಸಾಯಿ ಸುದರ್ಶನ್‌ ಹಾಗೂ ನಾಯಕ ಶುಭ್‌ಮನ್‌ ಗಿಲ್‌ ಆರಂಭಿಕರಾಗಿ ಕಣಕ್ಕಿಳಿದರು. ಸಾಯಿ ಸುದರ್ಶನ್‌ 35 (29) ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಜವಾಬ್ದಾರಿಯುತ ಆಟವನ್ನಾಡಿದ ಶುಭ್‌ಮನ್‌ ಗಿಲ್‌ 72 (44) ರನ್‌ ಬಾರಿಸಿದರು. ಇನ್ನುಳಿದಂತೆ ಮ್ಯಾಥ್ಯೂ ವೇಡ್‌ 4 (6) ರನ್‌, ಅಭಿನವ್‌ ಮನೋಹರ್‌ 1 (2) ರನ್‌, ವಿಜಯ್‌ ಶಂಕರ್‌ 16 (10) ರನ್‌, ಶಾರುಖ್‌ ಖಾನ್‌ 14 (8) ರನ್‌ ಗಳಿಸಿದರು. ಅಂತಿಮ ಹಂತದಲ್ಲಿ ಉತ್ತಮ ಆಟವನ್ನಾಡಿ ತಂಡವನ್ನು ಗೆಲುವಿನ ದಡ ಸೇರಿಸಿದ ರಾಹುಲ್‌ ತೆವಾಟಿಯಾ 22 (11) ರನ್‌ ಹಾಗೂ ರಶೀದ್‌ ಖಾನ್‌ ಅಜೇಯ 24 (11) ರನ್‌ ಗಳಿಸಿದರು. ಯಾವುದೇ ಎಸೆತ ಎದುರಿಸಿದ ನೂರ್‌ ಅಹ್ಮದ್‌ ಅಜೇಯರಾಗಿ ಉಳಿದರು.

ರಾಜಸ್ಥಾನ್‌ ರಾಯಲ್ಸ್‌ ಪರ ಕುಲ್‌ದೀಪ್ ಸೇನ್‌ 3 ವಿಕೆಟ್‌, ಯುಜ್ವೇಂದ್ರ ಚಹಲ್‌ 2 ವಿಕೆಟ್‌ ಹಾಗೂ ಅವೇಶ್‌ ಖಾನ್‌ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

13 mins ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

58 mins ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

1 hour ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

1 hour ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

1 hour ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

1 hour ago