ಪುಣೆ : ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಲಯದಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಎದುರಾಳಿಗಳ ನಿದ್ದೆಗೆಡಿಸುತ್ತಿದ್ದಾರೆ. ಇದೀಗ ಅವರು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತ್ಯಂತ ವೇಗವಾಗಿ ಕಾರು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿ ವಿವಾದಕ್ಕೆ ಒಳಗಾಗಿದ್ದಾರೆ ಎಂದು ಪುಣೆ ಟೈಮ್ಸ್ ಮಿರರ್ ವರದಿ ಮಾಡಿದೆ.
ರೋಹಿತ್ ತಮ್ಮ ಲ್ಯಾಂಬೋರ್ಗಿನಿ ಕಾರನ್ನು ಪ್ರತಿ ಗಂಟೆಗೆ 215 ಕಿ.ಮೀ. ವೇಗದಲ್ಲಿ ಚಲಾಯಿಸಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ದಂಡದ ಮೂರು ರಶೀದಿಗಳನ್ನು ಆನ್‌ಲೈನ್ ಮೂಲಕ ಪೊಲೀಸರು ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ನಿರ್ದಿಷ್ಟವಾಗಿ ಯಾವ ದಿನ ರೋಹಿತ್ ಕಾರು ಚಲಾಯಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ.
ರೋಹಿತ್ ಅವರ ಕಾರಿನ ವೇಗವು ಕೆಲವೊಮ್ಮೆ ಗಂಟೆಗೆ 215 ಕಿ.ಮೀ. ಅನ್ನು ಮುಟ್ಟಿದೆ ಎಂದು ಸಂಚಾರ ವಿಭಾಗದ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ. ಪಂದ್ಯಾವಳಿಯು ನಡೆಯುತ್ತಿರುವಾಗ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಂಡದ ಬಸ್‌ನಲ್ಲಿ ರೋಹಿತ್ ಪ್ರಯಾಣಿಸಬೇಕಾಗಿತ್ತು ಎಂದು ವರದಿ ತಿಳಿಸಿದೆ.
ಅಕ್ಟೋಬರ್ 14ರಂದು ಅಹ್ಮದಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯ ಆಡಿದ ನಂತರ ಭಾರತ ತಂಡ ಭಾನುವಾರವೇ ಪುಣೆ ನಗರಕ್ಕೆ ಬಂದಿಳಿದಿದೆ. ಸೋಮವಾರ ವಿಶ್ರಾಂತಿ ದಿನವಾಗಿದ್ದರಿಂದ ರೋಹಿತ್ ಅವರು ಬಹುಶಃ ಕುಟುಂಬದೊಂದಿಗೆ ಸಮಯ ಕಳೆಯಲು ಮುಂಬೈನಲ್ಲಿ ಉಳಿದುಕೊಂಡಿರಬಹುದು ಎಂದು ಹೇಳಲಾಗಿದೆ.
ರೋಹಿತ್ ನಡೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹಾಗೂ ಕಳವಳ ವ್ಯಕ್ತವಾಗಿದೆ. ವಿಶ್ವಕಪ್‌ನಂತಹ ಪ್ರಮುಖ ಟೂರ್ನಿಯ ಸಂದರ್ಭಗಳಲ್ಲಿ ಟೀಮ್ ಇಂಡಿಯಾ ನಾಯಕ ಎಚ್ಚರಿಕೆಯಿಂದ ಇರಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ.
ಇಷ್ಟು ವೇಗದಲ್ಲಿ ವಾಹನ ಚಲಾಯಿಸಿ ನಿಮಗಷ್ಟೇ ಅಲ್ಲದೆ ನಿಮ್ಮ ಕುಟುಂಬದವರಿಗೂ ಸುತ್ತಮುತ್ತಲಿನವರಿಗೂ ಅನಗತ್ಯ ತೊಂದರೆ ಕೊಡುವುದೇಕೆ? ಜನಪ್ರಿಯ ವ್ಯಕ್ತಿಯಾಗಿ ಸಾರ್ವಜನಿಕರಿಗೆ ಮಾದರಿಯಾಗಿರಿ ಎಂದು ನೆಟ್ಟಿಗರೊಬ್ಬರು ರೋಹಿತ್‌ಗೆ ಕಿವಿ ಮಾತು ಹೇಳಿದ್ದಾರೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…