ಬ್ರೆಜಿಲ್ : ಮನೆ ನಿರ್ಮಿಸುವಾಗ ಪರಿಸರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಫುಟ್‌ಬಾಲ್ ತಾರೆ ನೇಮರ್‌ಗೆ ಬರೋಬ್ಬರಿ 27 ಕೋಟಿ ರೂ. (3.3 ಮಿಲಿಯನ್ ಅಮೆರಿಕನ್ ಡಾಲರ್) ದಂಡ ವಿಧಿಸಲಾಗಿದೆ.
ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಬ್ರೆಜಿಲ್ ಅಧಿಕಾರಿಗಳು, ನೇಮರ್ ಅವರು ದಕ್ಷಿಣ ಬ್ರೆಜಿಲ್‌ನ ಕರಾವಳಿ ಪ್ರದೇಶದ ರಿಯೊ ಡಿ ಜನೈರೊದ ಹೊರವಲಯದಲ್ಲಿ ಐಷರಾಮಿ ಮನೆ ನಿರ್ಮಿಸಿದ್ದಾರೆ. ಅದಕ್ಕಾಗಿ ಶುದ್ಧ ನೀರಿನ ಮೂಲಗಳ ಬಳಕೆ, ಬಂಡೆ ಮತ್ತು ಮರಳು ಬಳಕೆ ವೇಳೆ ಪರಿಸರ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಅವರ ನಿವಾಸದಲ್ಲಿ ಕೃತಕ ಕೊಳ ನಿರ್ಮಾಣದ ವೇಳೆ ಪರಿಸರಕ್ಕೆ ಹಾನಿ ಮಾಡಲಾಗಿದೆ ಎಂದು ಮಂಗರಟಿಬ ಸಿಟಿ ಕೌನ್ಸಿಲ್ ದೂರಿನಲ್ಲಿ ತಿಳಿಸಿದೆ.
ಅನುಮತಿಯಿಲ್ಲದೆ ಪರಿಸರಕ್ಕೆ ಧಕ್ಕೆಯಾಗುವಂತಹ ಕೆಲಸ ಮಾಡಿರುವುದು, ನದಿ ನೀರನ್ನು ಬಳಸಿರುವುದು, ಸಸ್ಯವರ್ಗದ ಬೆಳವಣಿಗೆಗೆ ಅಡ್ಡಿಪಡಿಸಿರುವುದು ಸೇರಿದಂತೆ ಹಲವು ಅಪರಾಧಗಳನ್ನು ನೇಮರ್ ಮೇಲೆ ಹೊರಿಸಲಾಗಿದೆ.
ಬ್ರೆಜಿಲ್ ಫುಟ್‌ಬಾಲ್ ತಾರೆ ತಮ್ಮ ಬಲ ಪಾದದ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಫೆಬ್ರವರಿಯಿಂದ ಅವರು ಫುಟ್ಬಾಲ್ ಪಂದ್ಯಗಳಲ್ಲಿ ಆಡಿಲ್ಲ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…