Mysore
21
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

36ನೇ ರಾಷ್ಟ್ರೀಯ ಕ್ರೀಡಾಕೂಟ : ಮೈಸೂರಿನ ಖುಷಿಗೆ ಬೆಳ್ಳಿ ಪದಕ

ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್‌ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕುಮಾರಿ ಖುಷಿ ಹೆಚ್ ರವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕರ್ನಾಟಕ ತಂಡ ಒಟ್ಟು ಒಂದು ಚಿನ್ನ ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿರುತ್ತದೆ. ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿರುವುದು ವಿಶೇಷವಾಗಿದೆ.

ಕುಮಾರಿ ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆ ಮೈಸೂರು, ಇಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ನಂತರ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್ ಗಣೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದಾರೆ. ಮುಂದೆ ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದು ನನ್ನ ಗುರಿ ಎನ್ನುತ್ತಾರೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಖುಷಿ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!