ಮೈಸೂರು : ಜಿಲ್ಲೆಯ ಯೋಗಪಟು ಕುಮಾರಿ ಖುಷಿ ಹೆಚ್ ಅವರು ಗುಜರಾತಿನ ಅಹಮದಾಬಾದ್ ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಯೋಗಾಸನ ಕ್ರೀಡೆ ವಿಭಾಗದಲ್ಲಿ ಭಾಗವಹಿಸುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಕುಮಾರಿ ಖುಷಿ ಹೆಚ್ ರವರು ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಕರ್ನಾಟಕ ತಂಡ ಒಟ್ಟು ಒಂದು ಚಿನ್ನ ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿರುತ್ತದೆ. ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿರುವುದು ವಿಶೇಷವಾಗಿದೆ.
ಕುಮಾರಿ ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆ ಮೈಸೂರು, ಇಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ನಂತರ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್ ಗಣೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದಾರೆ. ಮುಂದೆ ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದು ನನ್ನ ಗುರಿ ಎನ್ನುತ್ತಾರೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಖುಷಿ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…