ನವದೆಹಲಿ : ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ಲಾಘಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಇದೊಂದು ಸ್ಮರಣೀಯ ಸಾಧನೆ, ಭಾರತವು ಅಭೂತಪೂರ್ವ 73 ಪದಕಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ ಪ್ರಬಲವಾಗಿ ಮುನ್ನಡೆಯುತ್ತಿದೆ, ಜಕಾರ್ತಾ 2018 ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 72 ಪದಕಗಳ ನಮ್ಮ ಹಿಂದಿನ ದಾಖಲೆಯನ್ನು ಮುರಿದಿದೆ.
ಈ ಮಹತ್ವದ ಸಂದರ್ಭವು ನಮ್ಮ ಕ್ರೀಡಾಪಟುಗಳ ಅಚಲ ನಿರ್ಣಯವನ್ನು ಸಾಕಾರಗೊಳಿಸುತ್ತದೆ ಎಂದು ಹೇಳಿದ್ದಾರೆ.
https://x.com/narendramodi/status/1717425825329582269?s=20
ಅಲ್ಲದೇ, ಪ್ರತಿಯೊಬ್ಬ ಭಾರತೀಯ ಹೃದಯದಲ್ಲಿ ಅಪಾರ ಸಂತೋಷವನ್ನು ತುಂಬುವ ಮೂಲಕ ಇತಿಹಾಸದಲ್ಲಿ ತಮ್ಮ ಹೆಸರನ್ನು ಕೆತ್ತಿರುವ ನಮ್ಮ ಅಸಾಧಾರಣ ಪ್ಯಾರಾ-ಕ್ರೀಡಾಪಟುಗಳನ್ನು ಶ್ಲಾಘಿಸುತ್ತೇನೆ. ಕ್ರೀಡಾಪಟುಗಳ ಬದ್ಧತೆ, ದೃಢತೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಈ ಸಾಧನೆಯು ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವ ಬೆಳಕಿನಂತೆ ಕಾರ್ಯನಿರ್ವಹಿಸಲಿ ಎಂದು ಆಶಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…