ನವದೆಹಲಿ: ಒಲಿಂಪಿಕ್ಸ್ ಗೇಮ್‌ನ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತೀಯ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆ ಪಡೆದಿರುವ ಮನು ಭಾಕರ್ ಇಂದು(ಆ.7) ಭಾರತಕ್ಕೆ ಬಂದಿಳಿದಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಬಂದ ಮನು ಬಾಕರ್ ಅವರಿಗೆ, ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು, ಕುಟುಂಬಸ್ಥರು, ಕ್ರೀಡಾಪಟುಗಳು ಹಾಗೂ ಅವರ ತವರು ರಾಜ್ಯ ಉತ್ತರಾಖಂಡದ ಅಧಿಕಾರಿಗಳು ಅವರನ್ನು ಕಾದು ಸ್ವಾಗತಿಸಿದರು.
ಹಾಡು, ನೃತ್ಯ, ತಮಟೆ ಬಾರಿಸುವ ಮೂಲಕ ಭಾಕರ್ ಆಗಮನವನ್ನು ಏರ್‌ಪೋರ್ಟ್‌ನಲ್ಲಿ ಜನ ಸಂಭ್ರಮಿಸಿದರು.
ಮಹಿಳೆಯರ 10ಮೀಟರ್ ಏರ್ ಶೂಟರ್ ಸ್ಪರ್ಧೆಯಲ್ಲಿ 22 ವರ್ಷದ ಮನು ಭಾಕರ್ ಕಂಚು ಗೆಲ್ಲುವ ಮೂಲಕ ಭಾರತದ ಖಾತೆ ತೆರೆದರು. ನಂತರ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಆಗಸ್ಟ್ 11 ಕ್ಕೆ ಮತ್ತೆ ಪ್ಯಾರಿಸ್‌ಗೆ ಮನು ಭಾಕರ್ ತೆರಳಲಿದ್ದು, ಒಲಿಂಪಿಕ್ಸ್ ಸಮಾರೋಮ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…