ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನ ಎಡ್ಜ್ ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಹಣಾಹಣಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡುವೆ ಆತಿಥೇಯ ಇಂಗ್ಲೆಂಡ್ ಎದುರು ಆಸ್ಟ್ರೇಲಿಯಾ 2 ವಿಕೆಟ್‌ಗಳ ರೋಚಕ ಜಯ ದಾಖಲಿಸಿತು.
ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋತರು ನಾಯಕ ಬೆನ್ ಸ್ಟೋಕ್ಸ್ ಅನುಸರಿಸಿದ ಆಕ್ರಮಣಕಾರಿ ಆಟದ ರಣತಂತ್ರಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅದರಲ್ಲೂ ಮೊದಲ ದಿನವೇ 383/8 ರನ್‌ಗಳಿಗೆ ಡಿಕ್ಲೇರ್ ಮಾಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದರು. ಬಳಿಕ ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 7 ರನ್‌ಗಳ ಮುನ್ನಡೆಗಳಿಸಿದರೂ, ಪಂದ್ಯದ ಕೊನೇ ದಿನದಾಟದಲ್ಲಿ ಕೇವಲ 2 ವಿಕೆಟ್ ಅಂತರದಲ್ಲಿ ನಿರಾಶೆ ಅನುಭವಿಸಿತು.
ಈ ಬಗ್ಗೆ ಮಾತನಾಡಿರುವ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಹಾಗೂ ಮಿಸ್ಟರ್ 360 ಖ್ಯಾತಿಯ ದಿಗ್ಗಜ ಬ್ಯಾಟರ್ ಎಬಿ ಡಿ’ವಿಲಿಯರ್ಸ್, ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ ಕ್ಯಾಪ್ಟನ್ಸಿ ಶೈಲಿಯನ್ನು ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ಎಂಎಸ್ ಧೋನಿ ಅವರ ಶೈಲಿಗೆ ಹೋಲಿಕೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಗೆಲುವು ಕಾಣಲು ಪರಿಸ್ಥಿತಿಗಳಿಗೆ ತಕ್ಕಂತೆ ದಿಟ್ಟ ನಿರ್ಧಾರಗಳನ್ನು ತೆಗದುಕೊಳ್ಳುವುದರ ಮೇಲಿರುತ್ತದೆ ಎಂದು ಎಬಿಡಿ ತಮ್ಮ ಟ್ವಿಟರ್ ಗೋಡೆಯ ಮೇಲೆ ಬರೆದುಕೊಂಡಿದ್ದಾರೆ.
ಕಳೆದ ವರ್ಷ ಇಂಗ್ಲೆಂಡ್ ಟೆಸ್ಟ್ ತಂಡದ ಕ್ಯಾಪ್ಟನ್ಸಿಗೆ ಜೋ ರೂಟ್ ಗುಡ್-ಬೈ ಹೇಳಿದ್ದರು. ಬಳಿಕ ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಮತ್ತು ನೂತನ ನಾಯಕ ಬೆನ್ ಸ್ಟೋಕ್ಸ್ ಜೋಡಿ ಅಕ್ಷರಶಃ ಮೋಡಿ ಮಾಡಿದೆ. ಕಳೆದ 14 ಟೆಸ್ಟ್‌ಗಳಲ್ಲಿ ಇಂಗ್ಲೆಂಡ್ 10 ಪಂದ್ಯಗಳನ್ನು ಗೆದ್ದು ಬೀಗಿದೆ. ಸ್ಟೋಕ್ಸ್ ಮತ್ತು ಮೆಕಲಮ್ ಅವರ ‘ಬಾಝ್‌ಬಾಲ್’ ಶೈಲಿಯ ಆಕ್ರಮಣಕಾರಿ ಕ್ರಿಕೆಟ್ ಜಗತ್ತನ್ನು ಅಕ್ಷರಶಃ ಬೆರಗುಗೊಳಿಸಿದೆ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…