ಕ್ರೀಡೆ

ಮನಸು ಗೆದ್ದ ಆಟಗಾರನನ್ನು ಹೆಸರಿಸಿದ ಎಬಿಡಿ

ಹೊಸದಿಲ್ಲಿ : ರಾಜಸ್ಥಾನ್‌ ರಾಯಲ್ಸ್ ತಂಡದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ತಮ್ಮ ಗಮನ ಸೆಳೆದಿದ್ದಾರೆಂದು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

2023ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ರಾಜಸ್ಥಾನ್‌ ರಾಯಲ್ಸ್ ಆರಂಭಿಕ ಯಶಸ್ವಿ ಜೈಸ್ವಾಲ್‌ ಕೂಡ ಇದ್ದಾರೆ. ಆಡಿದ 14 ಪಂದ್ಯಗಳಿಂದ ಜೈಸ್ವಾಲ್‌ 48.08ರ ಸರಾಸರಿಯಲ್ಲಿ 625 ರನ್‌ಗಳನ್ನು ಸಿಡಿಸಿದ್ದಾರೆ. ಇದರಲ್ಲಿ ಅವರು ಒಂದು ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ 4ನೇ ಸ್ಥಾನ ಅಲಂಕರಿಸಿದ್ದಾರೆ.

ಒಂದು ಕಡೆ ಸ್ಟಾರ್‌ ಬ್ಯಾಟ್ಸ್‌ಮನ್‌ ಜೋಸ್‌ ಬಟ್ಲರ್‌ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರೆ, ಮತ್ತೊಂದು ತುದಿಯಲ್ಲಿ ಯಶಸ್ವಿ ಜೈಸ್ವಾಲ್‌ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದರಲ್ಲೂ ವಿಶೇಷವಾಗಿ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪೈಕಿ ಇವರು ಕೂಡ ಒಬ್ಬರಾಗಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಅವರು ಯಶಸ್ವಿ ಜೈಸ್ವಾಲ್‌ ಬ್ಯಾಟಿಂಗ್‌ ಪ್ರದರ್ಶನವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಈ ಆವೃತ್ತಿಯಲ್ಲಿ ಯಶಸ್ವಿ ಜೈಸ್ವಾಲ್‌ ತಮ್ಮ ನೆಚ್ಚಿನ ಆಟಗಾರ ಎಂದು ಆರ್‌ಸಿಬಿ ದಿಗ್ಗಜ ಜಿಯೋ ಸಿನಿಮಾ ಚರ್ಚೆಯಲ್ಲಿ ಹೇಳಿಕೊಂಡಿದ್ದಾರೆ.

“ನನ್ನ ಪ್ರಕಾರ ಯಶಸ್ವಿ ಜೈಸ್ವಾಲ್‌ ದೊಡ್ಡ ಆಟಗಾರ. ಈ ಬಗ್ಗೆ ನನಗೆ ಖಚಿತತೆ ಇದೆ. ಈತನಿನ್ನೂ ಯುವ ಬ್ಯಾಟ್ಸ್‌ಮನ್ ಆಗಿದ್ದು, ಎಲ್ಲಾ ಶಾಟ್ಸ್‌ ಹೊಂದಿದ್ದಾರೆ. ಕ್ರೀಸ್‌ನಲ್ಲಿ ಯಾವಾಗಲೂ ಶಾಂತ ಸ್ವಭಾವವನ್ನು ಕಾಪಾಡಿಕೊಳ್ಳುವ ಇವರು, ಪವರ್‌ಪ್ಲೇನಲ್ಲಿ ಎದುರಾಳಿ ಬೌಲರ್‌ಗಳ ವಿರುದ್ಧ ಪ್ರಾಬಲ್ಯ ಸಾಧಿಸುತ್ತಾರೆ. ಇದರ ನಡುವೆ ಅವರು ತಮ್ಮ ಬ್ಯಾಟಿಂಗ್‌ನಲ್ಲಿ ತುಂಬಾ ನಿಯಂತ್ರಣವನ್ನು ಸಾಧಿಸಿದ್ದಾರೆ,” ಎಂದು ಎಬಿ ಡಿ ವಿಲಿಯರ್ಸ್ ಶ್ಲಾಘಿಸಿದ್ದಾರೆ.

16 ಪಂದ್ಯಗಳಿಂದ ಮೂರು ಶತಕ ಹಾಗೂ ನಾಲ್ಕು ಅರ್ಧಶತಕಗಳೊಂದಿಗೆ 851 ರನ್‌ ಗಳಿಸಿ 2023ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಅಗ್ರ ಸ್ಥಾನ ಅಲಂಕರಿಸಿರುವ ಶುಭಮನ್ ಗಿಲ್‌ ಅವರ ಬಗ್ಗೆಯೂ ಎಬಿ ಡಿ ವಿಲಿಯರ್ಸ್ ಈ ವೇಳೆ ಮಾತನಾಡಿದ್ದಾರೆ.

“ಶುಭಮನ್‌ ಗಿಲ್ ಸ್ವಲ್ಪ ವಯಸಾದವರು. ಹಾಗಾಗಿ ಯಶಸ್ವಿ ಜೈಸ್ವಾಲ್‌ಗೆ ದೀರ್ಘಾವಧಿ ಅವಕಾಶಗಳನ್ನು ನೀಡಬೇಕು. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ ಆಗುವ ಸಾಮರ್ಥ್ಯ ಯಶಸ್ವಿ ಜೈಸ್ವಾಲ್‌ಗೆ ಇದೆ,” ಎಂದು ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ಲಿಯರ್ಸ್ ಹೇಳಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಗುಜರಾತ್‌ ಟೈಟನ್ಸ್ ನಡುವಣ 2023ರ ಐಪಿಎಲ್‌ ಫೈನಲ್‌ ಪಂದ್ಯ ಭಾನುವಾರ ನಡೆಯಬೇಕಾಗಿತ್ತು. ಆದರೆ, ಮಳೆಯ ಕಾರಣ ಪಂದ್ಯ ನಡೆದಿರಲಿಲ್ಲ. ಹಾಗಾಗಿ ಫೈನಲ್ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಒಂದು ವೇಳೆ ಸೋಮವಾರವೂ ಹವಾಮಾನದಿಂದ ಪಂದ್ಯ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿರುವ ಗುಜರಾತ್‌ ಟೈಟನ್ಸ್ ಪ್ರಶಸ್ತಿ ಮುಡಿಗೇರಿಸಿಕೊಳ್ಳಲಿದೆ.

lokesh

Recent Posts

ಉಕ್ರೇನ್‌ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್‌ ದಾಳಿ: 14 ಮಂದಿ ಸಾವು!

ಕೈವ್:‌ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಮಾರಕ ಡ್ರೋನ್‌ ದಾಳಿ ನಡೆದಿದೆ. ಉಕ್ರೇನ್‌ನ ಡ್ನಿಪ್ರೊ ನಗರದ ಮುಖ್ಯ ರೈಲು ನಿಲ್ದಾಣದ ಮೇಲೆ…

12 hours ago

ಚಳಿಗಾಲ ಶುರು: ಕರ್ನಾಟಕದ ಗಾಳಿಯ ಗುಣಮಟ್ಟದಲ್ಲಿ ಕೊಂಚ ಇಳಿಕೆ!

ಬೆಂಗಳೂರು: ಚಳಿಗಾಲ ಆರಂಭವಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ವಾಯು ಗುಣಮಟ್ಟ…

12 hours ago

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್‌ ಪ್ರಯಾಣವೂ ದುಬಾರಿಯಾಗುತ್ತಾ?

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರಿ ಬಸ್‌ ಟಿಕೆಟ್‌ ದರವೂ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಅಕ್ಟೋಬರ್‌ 29ರಂದು…

12 hours ago

ಅರ್ನಬ್ ಬೆನ್ನಲ್ಲೇ ಮತ್ತೊಂದು ಆತಂಕ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ!

ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಹಾಗೂ…

13 hours ago

ಓದುಗರ ಪತ್ರ: ಶಿಕ್ಷಕರ ‘ಮೂಲ’ ಕರ್ತವ್ಯಕ್ಕೆ ಆದ್ಯತೆ ನೀಡಿ

ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…

13 hours ago

ಓದುಗರ ಪತ್ರ: ಮೈಸೂರು ರಾಜರ ಕೊಡುಗೆ ಮರೆಯುವಂತಿಲ್ಲ

ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…

13 hours ago