ದುಬೈ: ಕ್ರಿಕೆಟ್ ಅಭಿಮಾನಿಗಳು ಆಸಕ್ತಿಯಿಂದ ಕಾಯುತ್ತಿರುವ ಏಷ್ಯಾ ಕಪ್ 2022 ಕ್ರಿಕೆಟ್ ಟೂರ್ನಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂಡೊ-&-ಪಾಕ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿದರೆ ಅವರಿಗಿದು 100ನೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯವಾಗಲಿದೆ.
ಕೊಹ್ಲಿ ಹಲವು ತಿಂಗಳ ವಿರಾಮದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮತ್ತೆ ಮರಳಲಿದ್ದು ತಮ್ಮ 100ನೇ ಟಿ20 ಪಂದ್ಯವನ್ನಾಡಲು ಕಾತರರಾಗಿದ್ದಾರೆ. ಆಡಲು ಅವಕಾಶ ದೊರೆತರೆ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಭಾರತದ ಪರ 100 ಪಂದ್ಯಗಳನ್ನು ಆಡಿದ ಮೊದಲ ಆಟಗಾರ ಹಾಗೂ ವಿಶ್ವದ 2ನೇ ಆಟಗಾರ ಎಂಬ ವಿಶೇಷ ದಾಖಲೆ ಕೊಹ್ಲಿ ಪಾಲಾಗಲಿದೆ.
ಈ ನಡುವೆ ಹೈ-ವೋಲ್ಟೇಜ್ ಪಂದ್ಯದ ಮೂಲಕ ಕಮ್‌ಬ್ಯಾಕ್ ಮಾಡುತ್ತಿರುವ ಕೊಹ್ಲಿ ಅವರಿಗೆ ರಾಯಲ್ ಚಾಲೆಂಜರ್ಸ್‌ನಲ್ಲಿ ಅವರ ಸಹ ಆಟಗಾರನಾಗಿದ್ದ ಸ್ನೇಹಿತ, ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿʼವಿಲಿಯರ್ಸ್ ವಿಶೇಷ ಸಂದೇಶ ರವಾನಿಸಿದ್ದಾರೆ. ಏಷ್ಯಾ ಕಪ್ 2022 ಟೂರ್ನಿಯಲ್ಲಿ ತಮ್ಮ ಶ್ರೇಷ್ಠ ಲಯ ಕಂಡುಕೊಳ್ಳಿ ಎಂದು ಎಬಿಡಿ ಹಾರೈಸಿದ್ದಾರೆ. ಇನ್ನೂ ಅನೇಕ ಮಾಜಿ ಆಟಗಾರರು ಕೊಹ್ಲಿ ಅವರಿಗೆ ಶುಭ ಹಾರೈಸಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಳೆದ 3 ವರ್ಷಗಳಲ್ಲಿ 33 ವರ್ಷದ ಬಲಗೈ ಬ್ಯಾಟರ್ ವಿರಾಟ್ ಕೊಹ್ಲಿ ಸಾಲು ಸಾಲು ವೈಫಲ್ಯ ಅನುಭವಿಸಿದ್ದಾರೆ. ತಮ್ಮ 71ನೇ ಅಂತಾರಾಷ್ಟ್ರೀಯ ಶತಕದ ಸಲುವಾಗಿ ಕಿಂಗ್ ಕೊಹ್ಲಿ ಭಗೀರಥ ಪ್ರಯತ್ನ ನಡೆಸುತ್ತಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…