ಮುಂಬರುವ ಜೂನ್ 2ರಿಂದ ಚುಟುಕು ಕ್ರಿಕೆಟ್ ಸಮಯ ಟಿ20 ವಿಶ್ವಕಪ್ ಟೂರ್ನಿ ವೆಸ್ಟ್ ಇಂಡೀಸ್ ಹಾಗೂ ಯುಎಸ್‌ಎನಲ್ಲಿ ಆರಂಭಗೊಳ್ಳಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣಗೊಂಡಿದೆ.
ಅಡಿಡಾಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ʼಒಂದು ಜೆರ್ಸಿ, ಒಂದು ದೇಶʼ ಎಂಬ ಬರಹದೊಂದಿಗೆ ಹೊಸ ಜೆರ್ಸಿಯ ವಿಡಿಯೊವನ್ನು ಹಂಚಿಕೊಂಡಿದ್ದು, ಈ ಟ್ವೀಟ್ ಅನ್ನು ಬಿಸಿಸಿಐ ಶೇರ್ ಮಾಡಿಕೊಂಡಿದೆ.
ಕೇಸರಿ, ಬಿಳಿ, ಹಸಿರು ಬಣ್ಣಗಳ ಕಾಲರ್ ಇರುವ ನೀಲಿ ಹಾಗೂ ಕೇಸರಿ ಬಣ್ಣದ ಜೆರ್ಸಿ ಇದಾಗಿದ್ದು, ಜೆರ್ಸಿ ಲುಕ್ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಏರ್ಪಟ್ಟಿವೆ. ಹೆಚ್ಚಾಗಿ ಈ ಜೆರ್ಸಿ ಬಗ್ಗೆ ನೆಗೆಟಿವ್ ಕಾಮೆಂಟ್‌ಗಳೇ ಹರಿದಾಡುತ್ತಿವೆ.
ಟೀಮ್ ಇಂಡಿಯಾ ಜೂನ್ 5ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯವನ್ನಾಡಲಿದೆ. ಬಹು ನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಜೂನ್ 9ರಂದು ನಡೆಯಲಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…