ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ.
ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಸಂಸ್ಥೆಯಿಂದ ಈ ಫ್ರಾಂಚೈಸಿಯನ್ನ ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.
ಆದಿತ್ಯ ಬಿರ್ಲಾ ಗ್ರೂಪ್‌ನ ನಿರ್ದೇಶಕ ಆರ್ಯಮನ್ ವಿಕ್ರಮ್ ಬಿರ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದು, ಟೈಮ್ಸ್ ಆಫ್ ಇಂಡಿಯಾ ಗ್ರೂಪ್‌ನ ಸತ್ಯನ್ ಗಜ್ವಾನಿ ಫ್ರಾಂಚೈಸಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. 2026ರ 19ನೇ ಆವೃತ್ತಿಯ ಐಪಿಎಲ್ ಬಳಿಕ ಈ ಹೊಸ ಮಾಲೀಕತ್ವವು ಅಧಿಕೃತವಾಗಿ ಜಾರಿಗೆ ಬರಲಿದೆ. ಅಲ್ಲಿಯವರೆಗೆ ಡಿಯಾಜಿಯೊ ಸಂಸ್ಥೆಯೇ ತಂಡದ ಜವಾಬ್ದಾರಿಯನ್ನ ನಿರ್ವಹಿಸಲಿದೆ.
ಆರ್‌ಸಿಬಿ ಸೇಲ್ ಮಾಡಲು ಕಾರಣ ಏನು?
18ನೇ ಆವೃತ್ತಿಯಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಬಳಿಕ ಯುನೈಟೆಡ್ ಸ್ಪಿರಿಟ್ಸ್ ಹೂಡಿಕೆದಾರರು ಆತಂಕ ಹೊರಹಾಕಿದ್ದರು. ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಯಿದೆ. ಕೊಹ್ಲಿ ನಿವೃತ್ತಿ ಹೇಳಿದರೆ ಆರ್‌ಸಿಬಿ ಮೌಲ್ಯ ಕುಸಿಯುವ ಸಾಧ್ಯತೆಯಿದೆ. ಈ ಕಾರಣಕ್ಕೆ ಆರ್‌ಸಿಬಿ ತಂಡವನ್ನ ಯುನೈಟೆಡ್ ಸ್ಪಿರಿಟ್ಸ್ ಮಾರಾಟ ಮಾಡಿದೆ ಎನ್ನಲಾಗ್ತಿದೆ.
ಇದಕ್ಕೂ ಮೊದಲು ರಾಜಸ್ತಾನ ರಾಯಲ್ಸ್ ಫ್ರಾಂಚೈಸಿಯನ್ನು ಅಮೆರಿಕ ಮೂಲದ ಕಾಲ್‌ಸೋಮಾನಿ ನೇತೃತ್ವದ ಒಕ್ಕೂಟವು ಸುಮಾರು 15,290ಕೋಟಿಗೆ ಖರೀದಿಸಿತ್ತು.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…