ಕ್ರೀಡೆ

ಝದ್ರಾನ್ ಶತಕದ ನೆರವಿನಿಂದ ಆಸೀಸ್ ಗೆ 292 ರನ್ ಗುರಿ ನೀಡಿದ ಅಫ್ಘಾನಿಸ್ತಾನ

ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ಝದ್ರಾನ್ ಅವರ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯ ಗೆಲುವಿಗೆ 292 ರನ್ ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.

ಅಸೀಸ್ ವಿರುದ್ದ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ವಾಂಖೆಡೆ ಬ್ಯಾಟಿಂಗ್‌ ಸ್ನೇಹಿ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅಸೀಸ್ ಗೆ ಕಠಿಣ ಗುರಿ ನೀಡಬೇಕೆಂಬ ಉದ್ದೇಶ ದಿಂದ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನ್ ಪೆಡೆ ನಿಧಾನಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿತು. ಓಪನರ್ ರಹ್ಮತುಲ್ಲಾ ಗುರ್ಬಾಝ್ 21 ರನ್ ಗೆ ತಂಡದ 8 ನೇ ಓವರ್ ನಲ್ಲಿ ಹೇಝಲ್‌ವುಡ್‌ ಎಸೆತದಲ್ಲಿ ವಿಕೆಟ್ ಒಪ್ಪಿಸಿದರೆ ಮೂರನೇ ಕ್ರಮಾಂಕದಲ್ಲಿ ಬಂದ ರಹ್ಮತ್ ಶಾ 30 ರನ್ ಗೆ ಮಾಕ್ಸ್‌ವೆಲ್‌ ಆಫ್ ಸ್ಪಿನ್ ಗೆ ಔಟ್ ಆದರು. ಅಫ್ಘಾನಿಸ್ತಾನ ಪರ ಮೊದಲಿನಿಂದ ಕಡೇ ವರೆಗೂ ಏಕಾಂಗಿ ಹೋರಾಟ ಪ್ರದರ್ಶಿಸಿದ್ದ ಇಬ್ರಾಹೀಂ ಝದ್ರಾನ್ ಆಸ್ಟ್ರೇಲಿಯ ವಿರುದ್ಧ ಆಕರ್ಷಕ ಶತಕ ಬಾರಿಸಿ ತಂಡ ಅಲ್ಪ ಮೊತ್ತಕ್ಕೆ ಕುಸಿಯುವುದನ್ನು ತಡೆದರು. ಅಸೀಸ್ ವಿರುದ್ಧ ನಿಧಾನಗತಿ ರಕ್ಷಣಾತ್ಮಕ ಆಟವಾಡಿದ ಝದ್ರಾನ್ 142 ಎಸೆತಗಳಲ್ಲಿ 8 ಬೌಂಡರಿ 3 ಸಿಕ್ಸರ್ ಸಹಿತ 129 ರನ್ ಬಾರಿಸಿದರು.

ಅಫ್ಘಾನ್ ಪರ ನಾಯಕ ಹಶ್ಮತುಲ್ಲಾ ಶಾಹಿದಿ 26 , ಅಝ್ಮತುಲ್ಲಾ 22 , ಮುಹಮ್ಮದ್ ನಬಿ 12 ಗಳಿಸಿದರೆ ಕಡೇ ಗಳಿಗೆಯಲ್ಲಿ ಸ್ಟೋಟಕ ಬ್ಯಾಟಿಂಗ್ ಮಾಡಿದ ರಶೀದ್ ಖಾನ್ 35 ರನ್ ಬಾರಿಸಿದರು.

ಆಸ್ಟ್ರೇಲಿಯ ಪರ ಜೋಸ್ ಹೇಝಲ್‌ವುಡ್‌ 2 ವಿಕೆಟ್ ಪಡೆದರೆ ಮಿಷೆಲ್ ಸ್ಟಾರ್ಕ್, ಮ್ಯಾಕ್ಸ್‌ವೆಲ್ ಹಾಗೂ ಆಡಂ ಝಾಂಪ ತಲಾ ಒಂದು ವಿಕೆಟ್ ಕಬಳಿಸಿದರು.

andolanait

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

34 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

53 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago