ABU DHABI, UNITED ARAB EMIRATES - NOVEMBER 07: Mujeeb Ur Rahman of Afghanistan celebrates the wicket of Daryl Mitchell of New Zealand during the ICC Men's T20 World Cup match between New Zealand and Afghanistan at Sheikh Zayed stadium on November 07, 2021 in Abu Dhabi, United Arab Emirates. (Photo by Francois Nel/Getty Images)
ಏಷ್ಯಾಕಪ್ಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ಬಳಗವನ್ನು ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಅಫ್ಘಾನ್ನ ಯುವ ವೇಗಿ ನವೀನ್ ಉಲ್ ಹಕ್ ಸ್ಥಾನ ನೀಡಲಾಗಿಲ್ಲ. ಈ ಹಿಂದೆ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದು ನವೀನ್ ಉಲ್ ಹಕ್ ಭಾರೀ ಸುದ್ದಿಯಾಗಿದ್ದರು. ಅಲ್ಲದೆ ಏಷ್ಯಾಕಪ್ನಲ್ಲಿ ನವೀನ್ ಹಾಗೂ ಕೊಹ್ಲಿ ನಡುವಣ ಮುಖಾಮುಖಿಯನ್ನು ನಿರೀಕ್ಷಿಸಲಾಗಿತ್ತು. ಆದರೀಗ 17 ಸದಸ್ಯರ ಬಳಗದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬೌಲರ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಮತ್ತೊಂದೆಡೆ 6 ವರ್ಷಗಳ ಬಳಿಕ ಕರೀಮ್ ಜನತ್ ಅಫ್ಘಾನಿಸ್ತಾನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2017 ರಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವಾಡಿದ್ದ ಜನತ್ ಇದೀಗ ಏಷ್ಯಾಕಪ್ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ.
ಇನ್ನು ಪಾಕಿಸ್ತಾನ್ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಫರೀದ್ ಅಹ್ಮದ್ ಮಲಿಕ್ ಮತ್ತು ಶಾಹಿದುಲ್ಲಾ ಕಮಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಪಾಕ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಗಾಯಗೊಂಡಿರುವ ಅಜ್ಮತುಲ್ಲಾ ಒಮರ್ಜಾಯ್ ಬದಲಿಗೆ ಗುಲ್ಬದಿನ್ ನೈಬ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಮ್ ಜನತ್, ಅಬ್ದುಲ್ ರಹಮಾನ್, ಮುದ್ದೀನ್ ಅಶ್ರಫ್, ಅಬ್ದುಲ್ ರಹಮಾನ್ ರೆಹಮಾನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫಜಲ್ಹಕ್ ಫಾರೂಕಿ.
ಏಷ್ಯಾಕಪ್ ವೇಳಾಪಟ್ಟಿ:
ಸೂಪರ್-4 ವೇಳಾಪಟ್ಟಿ:
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…