Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಡಬ್ಲ್ಯೂಟಿಸಿ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿಕಾ

ಶ್ರೀಲಂಕಾ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಜಯಗಳಿಸುವ ಮೂಲಕ ದಕ್ಷಿಣಾ ಆಫ್ರಿಕಾ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಆಡುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ.

ಸೇಂಟ್‌ ಚಾರ್ಜ್‌ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಎರಡನೇ ಟೆಸ್ಟ್‌ ಪಂದ್ಯದಲ್ಲಿ 109 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು ವೈಟ್‌ವಾಶ್ ಮಾಡಿದೆ.

ಈ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ರೆಸ್‌ನಲ್ಲಿ ಮುಂದೆ ಇದ್ದ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕುವ ಮೂಲಕ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಡಬ್ಲ್ಯುಟಿಸಿ ಫೈನಲ್‌ ದೃಷ್ಠಿಯಿಂದ ಈ ಪಂದ್ಯದ ಗೆಲುವು ಸೌತ್‌ ಆಫ್ರಿಕಾ ತಂಡಕ್ಕೆ ಮುಖ್ಯವಾಗಿತ್ತು.

ಎರಡನೇ ಟೆಸ್ಟ್‌ ಪಂದ್ಯದ ಕೊನೆಯ ದಿನ ಗೆಲ್ಲಲು 348 ರನ್‌ಗಳ ಗುರಿ ಪಡೆದ ಶ್ರೀಲಂಕಾ ತಂಡ ಮೊದಲ ಸೆಷನ್‌ನಲ್ಲೇ 248 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿತು.

Tags:
error: Content is protected !!