ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಒಕ್ಕೂಟದ (ಎಐಎಫ್‌ಎಫ್) ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರವು ಮಾಡಿದ್ದ ಕೋರಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ಇದಲ್ಲದೆ, ಎಐಎಫ್‌ಎಫ್‌ನ ದಿನಂಪ್ರತಿ ವ್ಯವಹಾರಗಳನ್ನು 36 ರಾಜ್ಯಗಳ ಒಕ್ಕೂಟಗಳು ಆಯ್ಕೆ ಮಾಡಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯವರೇ ಸದ್ಯದ ಮಟ್ಟಿಗೆ ನಿರ್ವಹಿಸುವಂತೆ ಕೂಡ ನ್ಯಾ. ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ಆದೇಶಿಸಿದೆ. ಒಮ್ಮೆ ಪ್ರಧಾನ ಕಾರ್ಯದರ್ಶಿಯವರು ಅಧಿಕಾರ ವಹಿಸಿಕೊಂಡ ನಂತರ ಪ್ರಸ್ತುತ ಒಕ್ಕೂಟದ ಕಾರ್ಯಭಾರ ನೋಡಿಕೊಳ್ಳುತ್ತಿರುವ ಆಡಳಿತಗಾರರ ಸಮಿತಿಯು (ಸಿಒಎ) ಅಂತ್ಯಗೊಳ್ಳಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಎಐಎಫ್‌ಎಫ್‌ಅನ್ನು ಅಮಾನತ್ತು ಮಾಡಿರುವ ಆದೇಶವನ್ನುಅಂತಾರಾಷ್ಟ್ರೀಯ ಫುಟ್‌ಬಾಲ್ ಸಂಸ್ಥಗಳ ಒಕ್ಕೂಟವು (ಫಿಫಾ) ಹಿಂಪಡೆಯುವ ಪ್ರಕ್ರಿಯೆಯನ್ನು ಸರಾಗವಾಗಿಸಲು, ಆ ಮೂಲಕ ಹದಿನೇಳು ವರ್ಷದ ಕೆಳಗಿನವರ ವಿಶ್ವಕಪ್ ಅನ್ನು ಭಾರತದಲ್ಲಿ ಆಯೋಜಿಸುವ ಪ್ರತಿಷ್ಠಿತ ಅವಕಾಶಕ್ಕೆ ಧಕ್ಕೆ ಒದಗದಂತೆ ತಡೆಯಲು ಈ ಆದೇಶವು ಅನುವು ಮಾಡಲಿದೆ.
ನ್ಯಾಯಾಲಯವು ತನ್ನ ಆದೇಶದಲ್ಲಿ ನೀಡಿರುವ ಪ್ರಮುಖ ನಿರ್ದೇಶನಗಳು ಹೀಗಿವೆ:
ಹಿನ್ನೆಲೆ :
ಎಐಎಫ್‌ಎಫ್ ಅಧ್ಯಕ್ಷರಾಗಿದ್ದ ರಾಜಕಾರಣಿ ಪ್ರಫುಲ್ ಪಟೇಲ್ ತಮ್ಮ ಅವಧಿಯ ನಂತರವೂ ಅಧ್ಯಕ್ಷ ಪಟ್ಟದಲ್ಲಿ ಮುಂದುವರೆದಿದ್ದರಿಂದ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೊಸದಾಗಿ ಚುನಾವಣೆ ನಡೆಸಲು ಮನವಿ ಸಲ್ಲಿಸಲಾಗಿತ್ತು. ಮೇ 18ರಂದು ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಪ್ರಫುಲ್ ಪಟೇಲ್ ಸಹಿತ ಕಾರ್ಯಕಾರಿ ಸಮಿತಿಯನ್ನು ಕೆಳಗಿಳಿಯಲು ಸೂಚಿಸಿ, ಆ ಸ್ಥಾನಕ್ಕೆ ಆಡಳಿತಗಾರರ ಸಮಿತಿಯನ್ನು ನೇಮಿಸಿತ್ತು.
ಈ ಹಿನ್ನೆಲೆಯಲ್ಲಿ ಚುನಾಯಿತ ಮಂಡಳಿಯಲ್ಲದೆ ಬೇರೊಬ್ಬರು ಒಕ್ಕೂಟದ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುವುದು ಫಿಫಾದ ನಿಯಮಗಳಿಗೆ ವಿರುದ್ಧವಾಗಿದ್ದು ಫಿಫಾ ಎಐಎಫ್‌ಎಫ್‌ಅನ್ನು ಅಮಾನತು ಮಾಡಬೇಕು ಎಂದು ಪಟೇಲ್ ಫಿಫಾ ಮೊರೆ ಹೋಗಿದ್ದರು. ಮತ್ತೊಂದೆಡೆ ಒಕ್ಕೂಟಕ್ಕೆ ನೂತನ ಸಂವಿಧಾನವನ್ನು ಬರೆಯುವ ಹೊಣೆ ಹೊತ್ತ ಆಡಳಿತಗಾರರ ಸಮಿತಿಯು ಹಿಂದಿನ ಒಕ್ಕೂಟದ ಅಧ್ಯಕ್ಷ ಪ್ರಫುಲ್ ಪಟೇಲ್ ಹಾಗೂ ಪದಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪತ್ರಿಕಾ ಪ್ರಕಟಣೆ ನೀಡಿದ್ದ ಫಿಫಾ ತನ್ನ ನಿಯಮಾವಳಿಗಳನ್ನು ಉಲ್ಲಂಘಿಸಿ ಮೂರನೆಯವರು ಎಐಎಫ್‌ಎಪ್‌ನಲ್ಲಿ ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ಫಿಫಾ ಆಡಳಿತ ಮಂಡಳಿಯು ಎಐಎಫ್‌ಎಫ್‌ಅನ್ನು ಅಮಾನತ್ತುಗೊಳಿಸಿರುವುದಾಗಿ ತಿಳಿಸಿತ್ತು.
ಆಡಳಿಗಾರರ ಸಮಿತಿಯ ಜಾಗಕ್ಕೆ ಮತ್ತೆ ಎಐಎಫ್ಎಫ್‌ನ ಆಡಳಿತವು ಬಂದ ನಂತರ ಅಮಾನತು ರದ್ದುಗೊಳ್ಳಲಿದೆ ಎಂದು ಅದು ಹೇಳಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…