ಕ್ರೀಡೆ

ಐಪಿಎಲ್‌ಗೆ ಅಂತ್ಯ ಹಾಡಿದ ಆಲ್‌ರೌಂಡರ್‌ ಡ್ವೇನ್‌ ಬ್ರಾವೋ

16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್​ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಗುಡ್​ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್​ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ ಮಾಡಿಕೊಂಡಿದೆ. ಆದರೆ ಈ ಬಾರಿ ಬ್ರಾವೋ ಆಟಗಾರನಿಗೆ ಕಾಣಿಸಿಕೊಳ್ಳುವ ಬದಲು ತಂಡದ ಬೌಲಿಂಗ್ ಕೋಚ್​ ಆಗಿ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ನಂಬರ್ ಒನ್ ಆಗಿರುವ ಬ್ರಾವೋ ಇದೀಗ ಚೆನ್ನೈನಲ್ಲಿ ಬೌಲಿಂಗ್ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ತಂಡದ ಬೌಲಿಂಗ್ ಆಗಿದ್ದ ಲಕ್ಷ್ಮೀಪತಿ ಬಾಲಾಜಿ ಮುಂದಿನ ಆವೃತ್ತಿಯ ಐಪಿಎಲ್​ನಿಂದ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿರುವುದರಿಂದ ಅವರ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಹೇಳಿಕೆ ನೀಡುವ ಮೂಲಕ ಮಾಹಿತಿ ನೀಡಿದೆ. ಈ ಹೇಳಿಕೆಯಲ್ಲಿ, ಬ್ರಾವೋ, “ನಾನು ಈ ಹೊಸ ಪ್ರಯಾಣಕ್ಕಾಗಿ ಉತ್ಸುಕನಾಗಿದ್ದೇನೆ. ನಾನು ಬೌಲರ್‌ಗಳೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಹೀಗಾಗಿ ಈ ಪಾತ್ರದ ಬಗ್ಗೆ ನಾನು ಉತ್ಸುಕನಾಗಿದ್ದೇನೆ. ಆಟಗಾರನಿಂದ ಕೋಚ್‌ನವರೆಗಿನ ಪ್ರಯಾಣದಲ್ಲಿ, ನಾನು ಏನನ್ನೂ ಬದಲಾಯಿಸಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಏಕೆಂದರೆ ನಾನು ಆಡುವಾಗಲೂ ಬೌಲರ್‌ಗಳೊಂದಿಗೆ ಕೆಲಸ ಮಾಡುತ್ತಿದ್ದೆ. ಒಂದೇ ವ್ಯತ್ಯಾಸವೆಂದರೆ ನಾನು ಇನ್ನು ಮುಂದೆ ಮಿಡ್-ಆನ್ ಅಥವಾ ಮಿಡ್-ಆಫ್‌ನಲ್ಲಿ ನಿಲ್ಲುವುದಿಲ್ಲ ಎಂದಿದ್ದಾರೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

4 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

4 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

4 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

5 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

5 hours ago