ಕ್ರೀಡೆ

Paris Olympics 2024: ಬಾಕ್ಸಿಂಗ್‌ನಲ್ಲಿ ಸೆಮಿಗೆ ಲಗ್ಗೆಯಿಟ್ಟ ಅಮನ್‌ ಸೆಹ್ರಾವತ್‌

ಪ್ಯಾರಿಸ್‌: ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಅವರು ಇಲ್ಲಿನ ನಡೆಯುತ್ತಿರುವ ಒಲಂಪಿಕ್ಸ್‌ನ 57ಕೆಜಿ ಕುಸ್ತಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ.

ಗುರುವಾರ (ಆ.8) ನಡೆದ ಕ್ವಾರ್ಟರ್‌ ಫೈನಲ್ಸ್‌ ಪಂದ್ಯದಲ್ಲಿ ಅಲ್ಬೇನಿಯಾದ ಜೆಲಿಮ್‌ ಖಾನ್‌ ವಿರುದ್ಧ 12-0 ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಭಾರತ ಪರವಾಗಿ ಕುಸ್ತಿಯಲ್ಲಿ ಭಾಗವಹಿಸುತ್ತಿರುವ ಏಕೈಕ ಕುಸ್ತಿ ಆಟಗಾರ ಅಮನ್‌ ಸೆಹ್ರಾವತ್‌ ಆಗಿದ್ದು, ಇವರಿಗೆ ಈಗ ಕೇವಲ 21 ವರ್ಷ ವಯಸ್ಸು.

ಇದೇ ದಿನ ರಾತ್ರಿ 9.45ಕ್ಕೆ ನಡೆಯಲಿರುವ ಸೆಮಿ ಫೈನಲ್ಸ್‌ ಪಂದ್ಯದಲ್ಲಿ ಜಪಾನ್‌ನ ರೀ ಹಿಗುಚಿ ಅವರ ವಿರುದ್ಧ ಕಣಕ್ಕಿಳಿಯಲಿರುವ ಅಮನ್‌, ಗೆದ್ದು ಇತಿಹಾಸ ನಿರ್ಮಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

21 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

21 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago