ಕ್ರೀಡೆ

Paris Olympics 2024: ಅಮನ್‌ ಸೆಹ್ರಾವತ್‌ಗೆ ಒಲಿದ ಕಂಚಿನ ಪದಕ

ಪ್ಯಾರಿಸ್‌: ಒಲಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಭಾರತದ ಭರವಸೆಯ ಕುಸ್ತಿಪಟು ಅಮನ್‌ ಸೆಹ್ರಾವತ್‌ ಕಂಚಿನ ಪದಕ ಗೆದ್ದಿದ್ದಾರೆ. ಇದು ಭಾರತಕ್ಕೆ ಒಲಿದ ಐದನೇ ಕಂಚಿನ ಪದಕವಾಗಿದೆ.

ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಡೇರಿಯನ್ ಟೋಯಿ ಕ್ರೂಜ್‌ ವಿರುದ್ಧ 13-5 ಅಂಕಗಳ ಅಂತರದಿಂದ ಅಮನ್‌ ಗೆದ್ದು ಬೀಗಿದರು.

ಆರಂಭದಲ್ಲಿ ಕೊಂಚ ಮುನ್ನಡೆ ಸಾಧಿಸಿದ ಪೋರ್ಟೊ ರಿಕನ್‌ನ ಕ್ರೂಜ್‌ ಅವರು ಬಳಿಕ ಅಮನ್‌ ಅವರ ಸಮಯೋಜಿತ ಆಟದ ನೆರವಿನಿಂದ ಗೆದ್ದು ಬೀಗಿದರು. ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಅಮನ್‌ ಪಂದ್ಯದುದ್ದಕ್ಕೂ ಮುನ್ನಡೆ ಕಾಯ್ದುಕೊಂಡೇ ನಡೆದರು. ಎಲ್ಲಿಯೂ ಎದುರಾಳಿಗೆ ಅವಕಾಶ ಮಾಡಿಕೊಡಲೇ ಇಲ್ಲ. ಸೆಮಿ ಫೈನಲ್ಸ್‌ ಸೋಲಿನ ನೋವನ್ನು ಈ ಪಂದ್ಯದಲ್ಲಿ ತೀರಿಸಿಕೊಂಡರು.

ಮೊದಲ ಒಲಂಪಿಕ್ಸ್‌ನಲ್ಲಿಯೇ ಕಂಚಿನ ಪದಕ ಗೆಲ್ಲುವ ಮೂಲಕ ತಮ್ಮ ಚೊಚ್ಚಲ ಒಲಂಪಿಕ್ಸ್‌ನ್ನು ಪದಕದೊಂದಿಗೆ ಅಂತ್ಯಗೊಳಸಿದರು ಅಮನ್‌ ಸೆಹ್ರಾವತ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

32 mins ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

34 mins ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

40 mins ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

48 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

53 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

15 hours ago