ಕ್ರೀಡೆ

ಭಾರತೀಯ ಕ್ರಿಕೆಟ್​ನ ಎಲ್ಲಾ ಪ್ರಕಾರಗಳಿಗೆ ನಿವೃತ್ತಿ ಘೋಷಿಸಿದ ಅಂಬಟಿ ರಾಯುಡು

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್‌ನ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿಯಾಗುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಸೋಮವಾರ ನಡೆದ ಐಪಿಎಲ್-2023 ರ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿತು. ಈ ಪಂದ್ಯದಲ್ಲಿ ರಾಯುಡು ಎಂಟು ಎಸೆತಗಳಲ್ಲಿ 19 ರನ್ ಗಳಿಸಿ ಚೆನ್ನೈ ತಂಡವನ್ನು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಕರೆತಂದಿದ್ದರು.

ಐಪಿಎಲ್ ಇತಿಹಾಸದಲ್ಲಿ ಎರಡು ತಂಡಗಳ ಪರ ಆಡಿರುವ ರಾಯಡು ಆರು ಬಾರಿ ಐಪಿಎಲ್ ಗೆದ್ದಿರುವ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟ್ಸ್‌ಮನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಪರ ತಲಾ ಮೂರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

ಟೀಂ ಇಂಡಿಯಾ ಪರ 55 ಏಕದಿನ ಪಂದ್ಯಗಳನ್ನು ಆಡಿರುವ ರಾಯುಡು 47.05 ಸರಾಸರಿಯಲ್ಲಿ 1694 ರನ್ ಬಾರಿಸಿದ್ದಾರೆ. ಔಟಾಗದೆ 124 ರನ್ ಬಾರಿಸಿರುವುದು ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಮೂರು ಶತಕ ಮತ್ತು 10 ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಟೀಂ ಇಂಡಿಯಾ ಪರ ಆರು ಟಿ20 ಪಂದ್ಯಗಳನ್ನು ಆಡಿ 42 ರನ್ ಸಿಡಿಸಿದ್ದಾರೆ.

ಇನ್ನು ದೇಶಿ ಕ್ರಿಕೆಟ್​ನಲ್ಲಿ 97 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ರಾಯುಡು 45.56 ರ ಸರಾಸರಿಯಲ್ಲಿ 16 ಶತಕ ಮತ್ತು 34 ಅರ್ಧಶತಕಗಳನೊಳಗೊಂಡಂತೆ 6,151 ರನ್ ಬಾರಿಸಿದ್ದಾರೆ. 178 ಲಿಸ್ಟ್-ಎ ಕ್ರಿಕೆಟ್ ಪಂದ್ಯಗಳಲ್ಲಿ ಐದು ಶತಕ ಸೇರಿದಂತೆ 40 ರ ಸರಾಸರಿಯಲ್ಲಿ 5,607 ರನ್ ಬಾರಿಸಿದ್ದಾರೆ.

2010-2017 ರವರೆಗೆ 114 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದ ರಾಯಡು 126.16 ಸ್ಟ್ರೈಕ್ ರೇಟ್‌ ಹಾಗೂ 27.15 ರ ಸರಾಸರಿಯಲ್ಲಿ 14 ಅರ್ಧ ಶತಕಗಳೊಂದಿಗೆ 2,416 ರನ್ ಬಾರಿಸಿದ್ದರು. ಔಟಾಗದೆ 81* ಬಾರಿಸಿದ್ದು ಅವರ ಅತ್ಯಧಿಕ ರನ್ ಆಗಿತ್ತು.

2018 ರಲ್ಲಿ ಚೆನ್ನೈ ತಂಡ ಸೇರಿಕೊಂಡ ರಾಯುಡು ತಂಡದ ಪರ 90 ಪಂದ್ಯಗಳನ್ನಾಡಿದ್ದು, 30.18 ರ ಸರಾಸರಿಯಲ್ಲಿ 1,932 ರನ್ ಬಾರಿಸಿದ್ದಾರೆ. ಚೆನ್ನೈ ಪರ ಶತಕ ಮತ್ತು ಎಂಟು ಅರ್ಧಶತಕಗಳನ್ನು ಬಾರಿಸಿರುವ ರಾಯುಡು ಅವರ ಅತ್ಯುತ್ತಮ ಸ್ಕೋರ್ 100*.

lokesh

Recent Posts

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಆರು ನಿರ್ಣಯಗಳನ್ನು ಮಂಡಿಸಿದ ಕಸಾಪ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…

8 mins ago

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

45 mins ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

1 hour ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

2 hours ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

2 hours ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

2 hours ago