ಕ್ರೀಡೆ

ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಜೋಗಿಂದರ್ ಶರ್ಮಾ

ಬೆಂಗಳೂರು: 2007ರ ಚೊಚ್ಚಲ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತದ ಪರ ಬೌಲಿಂಗ್ ಮಾಡಿ, ಗೆಲುವಿನ ನಗೆ ಬೀರುವಂತೆ ಮಾಡಿದ್ದ ವೇಗದ ಬೌಲರ್ ಜೋಗಿಂದರ್ ಶರ್ಮಾ ಅವರು ಇದೀಗ ಎಲ್ಲ ಮಾದರಿಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಜೋಗಿಂದರ್ 2004 ಮತ್ತು 2007ರ ನಡುವೆ ನಾಲ್ಕು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದು ಒಟ್ಟಾರೆ ಐದು ವಿಕೆಟ್​ಗಳನ್ನು ಪಡೆದಿದ್ದಾರೆ. ದೇಶೀಯ ಕ್ರಿಕೆಟ್​ನಲ್ಲಿ ಹರಿಯಾಣವನ್ನು ಪ್ರತಿನಿಧಿಸುವ ಇವರು ಟ್ವಿಟರ್​ನಲ್ಲಿ  ನಿವೃತ್ತಿ ಕುರಿತು ಘೋಷಣೆ ಮಾಡಿದ್ದಾರೆ. 2007ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ಪಾಕಿಸ್ತಾನ ವಿರುದ್ಧ ಕೊನೆಯ ಓವರ್​ನಲ್ಲಿ ತಂಡಕ್ಕೆ ಜಯ ತಂದುಕೊಟ್ಟಿದ್ದ ಜೋಗಿಂದರ್ ಇಂದುಕೂಡ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

10 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

11 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

11 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

11 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

11 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

11 hours ago