ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ 50 ಮೀ ರೈಫಲ್ 3 ಪೊಸಿಷನ್ ವಿಭಾಗದಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಈ ವರ್ಷ ಗೆದ್ದಿರುವ ಪದಕಗಳ ಸಂಖ್ಯೆ ಮೂರಕ್ಕೆ ಏರಿದೆ.
ಪ್ಯಾರಿಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕುಸಾಲೆ 451.4 ಪಾಯಿಂಟ್‌ಗಳೊಂದಿಗೆ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.





