ಮೆಲ್ಬೋರ್ನ್ : ಇಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಎಡಗೈ ದಾಂಡಿಗ ಡೆವಿಡ್ ವಾರ್ನರ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಪಾಕ್ ವಿರುದ್ಧದ ಪಂದ್ಯದಲ್ಲಿ 38 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಪರವಾಗಿ ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಾರ್ನರ್ ಎರಡನೇ ಸ್ಥಾನ ಪಡೆದು ದಾಖಲೆ ಬರೆದಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಸೀಸ್ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಭರ್ಜರಿ ಒಪನಿಂಗ್ ಒದಗಿಸಿದರು. ಮೊದಲ ವಿಕೆಟ್ಗೆ 90 ರನ್ಗಳ ಜೊತೆಯಾಟವಾಡಿದ ಬಳಿಕ ಡೇವಿಡ್ ವಾರ್ನರ್ (38) ಸಲ್ಮಾನ್ ಅಲಿ ಅಘಾ ಎಸೆತದಲ್ಲಿ ಸ್ಲಿಪ್ನಲ್ಲಿ ಕ್ಯಾಚ್ ನೀಡಿದರು. ಈ 38 ರನ್ಗಳ ಇನಿಂಗ್ಸ್ನೊಂದಿಗೆ ವಾರ್ನರ್ ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಆಸೀಸ್ ಮಾಜಿ ನಾಯಕ ಸ್ಟೀವ್ ವಾ 548 ಇನಿಂಗ್ಸ್ಗಳಿಂದ 18496 ರನ್ ಕಲೆಹಾಕಿದ್ದರು. ಇದೀಗ ಈ ದಾಖಲೆಯನ್ನು ಮುರಿದಿರುವ ಡೇವಿಡ್ ವಾರ್ನರ್ 460 ಇನಿಂಗ್ಸ್‌ನಲ್ಲಿ ಇದುವರೆಗೆ 18502 ರನ್ ಕಲೆಹಾಕಿದ್ದಾರೆ. ಆ ಮೂಲಕ ಆಸೀಸ್ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಪಂಟರ್ ಖ್ಯಾತಿಯ ರಿಕ್ಕಿ ಪಾಟಿಂಗ್ ಅಗ್ರಸ್ಥಾನದಲ್ಲಿದ್ದು, ಅವರು 667 ಇನಿಂಗ್ಸ್ಗಳಲ್ಲಿ ಒಟ್ಟು 27368 ರನ್ ಕಲೆಹಾಕಿದ್ದಾರೆ. ಇದು ಆಸೀಸ್ ಪರ ಇಂಟರ್ನ್ಯಾಷನಲ್ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಮೊದಲಿಗರಾಗಿದ್ದಾರೆ.
ಜನವರಿ 3 ರಿಂದ ಆರಂಭವಾಗಲಿರುವ ಪಾಕಿಸ್ತಾನ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ವಾರ್ನರ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ.
ಆಸ್ಟ್ರೇಲಿಯಾ ಇನ್ನಿಂಗ್ಸ್:
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಉತ್ತಮ ಆರಂಭ ಪಡೆದಿದೆ. ಡೇವಿಡ್ ವಾರ್ನರ್ (38) ಹಾಗೂ ಉಸ್ಮಾನ್ ಖ್ವಾಜಾ (42) ಗಳಿಸಿ ನಿರ್ಗಮಿಸಿದರೆ, ಕ್ರೀಸ್ನಲ್ಲಿ ಮಾರ್ನಸ್ ಲಾಬುಶೇನ್ (22*) ಹಾಗೂ ಸ್ಟೀವ್ ಸ್ಮಿತ್ (19*) ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಸೀಸ್ 54.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 141ರನ್ ಕಲೆಹಾಕಿ ಬ್ಯಾಟಿಂಗ್ ಮಾಡುತ್ತಿದೆ.
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…