ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ.
ರವೀಂದ್ರ ಜಡೇಜಾ ವಿಶ್ವಕಪ್ ಟ್ರೋಫಿಯೊಂದಿಗೆ ತಮ್ಮ ಚಿತ್ರವನ್ನ ಸಾಮಾಜಿಕ ಜಾಲಾತಾಣದಲ್ಲಿ ಪೊಸ್ಟ್ ಮಾಡಿ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿದಾಯದ ಕುರಿತು ಪೋಸ್ಟ್ ಮಾಡಿರುವ ರವೀಂದ್ರ ಜಡೇಜಾ, ಧನ್ಯವಾದ ತುಂಬಿದ ಹೃದಯದಿಂದ ನಾನು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯತ್ತಮವಾದದ್ದನ್ನು ನೀಡಿದ್ದೇನೆ. ಇತರ ಮಾದರಿ ಕ್ರಿಕೆಟ್‌ಗಳಲ್ಲಿ ನಾನು ಮಂದುವರೆಯಲಿದ್ದೇನೆ. ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸು, ಆ ಕನಸು ನನಸಾಯಿತು. ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಮೈಲಿಗಲ್ಲು. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಟೀಂ ಇಂಡಿಯಾ ತಂಡದ ದಿಗ್ಗಜ ನಾಯಕರೇ ವಿದಾಯ ಹೇಳಿರುವುದು ಭಾರತ ತಂಡದ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆಲ್ ರೌಂಡರ್ ರವೀಂದ್ರ ಜಡೇಜ ಅವರು ಎಂ ಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪ್ರವೇಶ ಪಡೆದಿದ್ದರು. ಬಳಿಕ ಅವರು ಕ್ರಿಕೆಟ್ ಅಂಗಳದಲ್ಲಿ ಬಹು ದೂರ ಸಾಗಿದ್ದಾರೆ.