ಕ್ರೀಡೆ

ಕೊಹ್ಲಿ, ರೋಹಿತ್‌ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾಗೆ ಮತ್ತೊಂದು ಶಾಕ್‌…

ನವದೆಹಲಿ: ಟೀಂ ಇಂಡಿಯಾ ಟಿ20 ವಿಶ್ವಕಪ್‌ ಗೆದ್ದ ಖುಷಿಯಲ್ಲಿದೆ. ಈ ಬೆನ್ನಲ್ಲೇ ಟಿ20 ವಿಶ್ವಕಪ್‌ಗೆ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಇವರ ಹಾದಿ ಹಿಡಿದ ರವೀಂದ್ರ ಜಡೇಜಾ ಕೂಡ ಅಂತರಾಷ್ಟ್ರೀಯಾ ಟಿ20 ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ.

ರವೀಂದ್ರ ಜಡೇಜಾ ವಿಶ್ವಕಪ್‌ ಟ್ರೋಫಿಯೊಂದಿಗೆ ತಮ್ಮ ಚಿತ್ರವನ್ನ ಸಾಮಾಜಿಕ ಜಾಲಾತಾಣದಲ್ಲಿ ಪೊಸ್ಟ್‌ ಮಾಡಿ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿದಾಯದ ಕುರಿತು ಪೋಸ್ಟ್‌ ಮಾಡಿರುವ ರವೀಂದ್ರ ಜಡೇಜಾ, ಧನ್ಯವಾದ ತುಂಬಿದ ಹೃದಯದಿಂದ ನಾನು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ಯಾವಾಗಲೂ ನನ್ನ ದೇಶಕ್ಕಾಗಿ ಅತ್ಯತ್ತಮವಾದದ್ದನ್ನು ನೀಡಿದ್ದೇನೆ. ಇತರ ಮಾದರಿ ಕ್ರಿಕೆಟ್‌ಗಳಲ್ಲಿ ನಾನು ಮಂದುವರೆಯಲಿದ್ದೇನೆ. ಟಿ20 ವಿಶ್ವಕಪ್‌ ಗೆಲ್ಲುವುದು ನನ್ನ ಕನಸು, ಆ ಕನಸು ನನಸಾಯಿತು. ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಮೈಲಿಗಲ್ಲು. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲವಾದ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಟೀಂ ಇಂಡಿಯಾ ತಂಡದ ದಿಗ್ಗಜ ನಾಯಕರೇ ವಿದಾಯ ಹೇಳಿರುವುದು ಭಾರತ ತಂಡದ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆಲ್‌ ರೌಂಡರ್‌ ರವೀಂದ್ರ ಜಡೇಜ ಅವರು ಎಂ ಎಸ್‌ ಧೋನಿ ನಾಯಕತ್ವದಲ್ಲಿ ಭಾರತ ತಂಡಕ್ಕೆ ಪ್ರವೇಶ ಪಡೆದಿದ್ದರು. ಬಳಿಕ ಅವರು ಕ್ರಿಕೆಟ್‌ ಅಂಗಳದಲ್ಲಿ ಬಹು ದೂರ ಸಾಗಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

27 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

46 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago