ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ.
1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅಬ್ಬಾಸ್ ಅವರು ಭಾರತ ತಂಡವನ್ನು ಮುನ್ನಡೆಸಿದ್ದರು. 1970ರಲ್ಲಿ ಅವರು ಏಷ್ಯನ್ ಆಲ್ ಸ್ಟಾರ್ ತಂಡದಲ್ಲಿಯೂ ಸ್ಥಾನ ಪಡೆದಿದ್ದರು. ಅದೇ ವರ್ಷ ಅವರಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.
ಮಿಂಚಿನ ವೇಗದ ಆಟಕ್ಕೆ ಹೆಸರಾಗಿದ್ದ ಅಬ್ಬಾಸ್ ಅವರದ್ದು ಬ್ಯಾಸ್ಕೆಟ್‌ಬಾಲ್ ಕ್ರೀಡೆಯಲ್ಲಿ ಅಚ್ಚಳಿಯದ ಹೆಸರು. 5.11 ಅಡಿ ಎತ್ತರವಿದ್ದ ಅವರ ಆಟದ ಶೈಲಿಯು ಜನಪ್ರಿಯವಾಗಿತ್ತು. ಮುಂಬೈ ಹಾಗೂ ರೈಲ್ವೆ ತಂಡಗಳ ಪ್ರಮುಖ ಆಟಗಾರರಾಗಿದ್ದರು.
ಅಬ್ಬಾಸ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…