Mysore
27
overcast clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಅರ್ಜುನ ಪ್ರಶಸ್ತಿ ಪಡೆದ ವೇಗಿ ಮೊಹಮ್ಮದ್‌ ಶಮಿ!

ನವದೆಹಲಿ: ಟೀಂ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ ಅವರು ಕ್ರೀಡೆಗೆ ನೀಡುವ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಇಂದು (ಮಂಗಳವಾರ) ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅರ್ಜುನ ಪ್ರಶಸ್ತಿಯನ್ನು ಕ್ರಿಕೆಟಿಗ ಶಮಿ ಸ್ವೀಕರಿಸಿದರು.

೨೦೨೩ರಲ್ಲಿ ನಡೆದ ಏಕದಿನ ವಿಶ್ವಕಪ್‌ ನಲ್ಲಿ ಮೊಹಮ್ಮದ್‌ ಶಮಿ ತೋರಿದ ಉತ್ತಮ ಪ್ರದರ್ಶನದಿಂದಾಗಿ ಬಿಸಿಸಿಐ ಈ ಬಾರಿಯ ಅರ್ಜುನ ಪ್ರಶಸ್ತಿಗೆ ಶಮಿ ಅವರ ಹೆಸರನ್ನು ಶಿಫಾರಸ್ಸು ಮಾಡಿತ್ತು. ಅದರಂತೆ ಇಂದು ಭಾರತದ ಎರಡನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ವೇಗಿ ಶಮಿ ಪಾತ್ರರಾಗಿದ್ದಾರೆ.

ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿದ ಒಟ್ಟು ೨೬ ಜನರಿಗೆ ಅರ್ಜುನ ಪ್ರಶಸ್ತಿ ಮತ್ತು ಬ್ಯಾಡ್‌ಮಿಂಟನ್‌ನಲ್ಲಿ ಸಾಧನೆ ತೋರಿದ ಇಬ್ಬರಿಗೆ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.

ಭಾರತ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಕೇವಲ ೭ ಪಂದ್ಯಗಳಿಂದ ೨೪ ವಿಕೆಟ್‌ ಕಬಳಿಸಿದ ಶಮಿ, ಟೂರ್ನಿಯಲ್ಲೇ ಅತಿ ಹೆಚ್ಚು ವಿಕೆಟ್‌ ಪಡೆದ ಆಟಗಾರನಾಗಿ ಹೊರಹೊಮ್ಮಿದ್ದರು. ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆಯಿಡುವಲ್ಲಿ ಶಮಿ ಪಾತ್ರ ಪ್ರಮುಖವಾಗಿತ್ತು. ಫೈನಲ್‌ ಪಂದ್ಯದಲ್ಲಿ ಆಸೀಸ್‌ ವಿರುದ್ಧ ಸೋತ ಭಾರತ ತಂಡ ರನ್ನರ್‌ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಇಬ್ಬರು ಬ್ಯಾಡ್ಮಿಂಟನ್ ತಾರೆಗಳಿಗೆ ಮೇಜರ್ ಧ್ಯಾನ್​ ಚಂದ್ ಖೇಲ್ ರತ್ನ ಪ್ರಶಸ್ತಿ: ಭಾರತದ ಬ್ಯಾಡ್ಮಿಂಟನ್ ತಾರೆಗಳಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ನೀಡಿ ಗೌರವಿಸಲಾಯಿತು. ಈ ಜೋಡಿಗೆ ಖೇಲ್ ರತ್ನ ಪ್ರಶಸ್ತಿ ನೀಡುವ ಮೂಲಕ ರಾಷ್ಟ್ರಪತಿ ದ್ರೌಪದಿ ಮರ್ಮು ಗೌರವಿಸಿದರು.

ಅರ್ಜುನ ಪ್ರಶಸ್ತಿ ಪಡೆದ ಕ್ರೀಡಾಪಟುಗಳಿವರು:

ಓಜಸ್ ಪ್ರವೀಣ್ ಡಿಯೋಟಾಲೆ (ಆರ್ಚರಿ)
ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ)
ಶ್ರೀಶಂಕರ್ (ಅಥ್ಲೆಟಿಕ್ಸ್)
ಪಾರುಲ್ ಚೌಧರಿ (ಅಥ್ಲೆಟಿಕ್ಸ್)
ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸರ್)
ಆರ್ ವೈಶಾಲಿ (ಚೆಸ್)
ಮೊಹಮ್ಮದ್ ಶಮಿ (ಕ್ರಿಕೆಟ್)
ಅನುಷ್ ಅಗರ್ವಾಲ್ (ಇಕ್ವಿಸ್ಟ್ರಿಯನ್)
ದಿವ್ಯಾಕೃತಿ ಸಿಂಗ್ (ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್)
ದೀಕ್ಷಾ ದಾಗರ್ (ಗಾಲ್ಫ್)
ಕೃಷ್ಣ ಬಹದ್ದೂರ್ ಪಾಠಕ್ (ಹಾಕಿ)
ಸುಶೀಲಾ ಚಾನು (ಹಾಕಿ)
ಪವನ್ ಕುಮಾರ್ (ಕಬಡ್ಡಿ)
ರಿತು ನೇಗಿ (ಕಬಡ್ಡಿ)
ನಸ್ರೀನ್ (ಖೋ-ಖೋ)
ಪಿಂಕಿ (ಲಾನ್ ಬಾಲ್)
ಐಶ್ವರ್ಯ ಪ್ರತಾಪ್ ಸಿಂಗ್ ತೋಮರ್ (ಶೂಟಿಂಗ್)
ಇಶಾ ಸಿಂಗ್ (ಶೂಟಿಂಗ್)
ಹರಿಂದರ್ ಪಾಲ್ ಸಿಂಗ್ (ಸ್ಕ್ವಾಷ್)
ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್)
ಸುನಿಲ್ ಕುಮಾರ್ (ಕುಸ್ತಿ)
ಆಂಟಿಮ್ ಪಂಘಲ್ (ಕುಸ್ತಿ)
ರೋಶಿಬಿನಾ ದೇವಿ (ವುಶು)
ಶೀತಲ್ ದೇವಿ (ಪ್ಯಾರಾ ಆರ್ಚರಿ)
ಅಜಯ್ ಕುಮಾರ್ (ಅಂಧರ ಕ್ರಿಕೆಟ್)
ಪ್ರಾಚಿ ಯಾದವ್ (ಪ್ಯಾರಾ ಕೆನೋಯಿಂಗ್)

ಮೇಜರ್ ಧ್ಯಾನ್​ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆದ ಕ್ರೀಡಾಪಟುಗಳಿವರು:

ಚಿರಾಗ್ ಶೆಟ್ಟಿ
ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!