ಕ್ರೀಡೆ

ಅರ್ಜುನ ಪ್ರಶಸ್ತಿ ವಿಜೇತ ಅಥ್ಲಿಟ್‌ ಕೆನೆತ್‌ ಪೋವಲ್‌ ಇನ್ನಿಲ್ಲ

ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್‌ ಕೆನೆತ್‌ ಪೋವೆಲ್‌ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಕೆನೆತ್‌ ಪೋವೆಲ್‌ ಅವರು 1970ರಲ್ಲಿ ‘ಏಷ್ಯನ್‌ ಗೇಮ್ಸ್‌’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್‌ ಪೋವೆಲ್‌ ಅವರು ಭಾರತ ಪ್ರಮುಖ ಓಟಗಾರರಲ್ಲಿ ಒಬ್ಬರೆನಿಸಿಕೊಂಡಿದ್ದರು. 1970ರ ಏಷ್ಯನ್ ಗೇಮ್ಸ್‌ನ 4x100m ರಿಲೆಯಲ್ಲಿ ಅವರು ಕಂಚಿನ ಪದಕ ಪಡೆದುಕೊಂಡಿದ್ದರು.

82 ವರ್ಷ ವಯಸ್ಸಿನ ಕೆನೆತ್‌ ಪೋವೆಲ್‌ ಅವರು, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಳೆ ಮೈಸೂರು ಭಾಗದ ಪ್ರಪ್ರಥಮ ಕ್ರೀಡಾಪಟುವೂ ಹೌದು.  ಕರ್ನಾಟಕಕ್ಕೆ ಅರ್ಜುನ ಪ್ರಶಸ್ತಿಯನ್ನು ತಂದುಕೊಟ್ಟ ಮೊದಲಿಗರೂ ಕೂಡ. ಭಾರತದ ಪರ ಅವರು ಅನೇಕ ಅಂತರರಾಷ್ಟ್ರೀಯ ಪದಕಗಳನ್ನು ಗೆದ್ದಿದ್ದಾರೆ.

ಕೋಲಾರದ ಕೆಜಿಎಫ್‌ನಲ್ಲಿ ಜನಿಸಿದ ಕೆನೆತ್‌ ಅಣ್ಣಸ್ವಾಮಿ ಮೊದಲಿಯಾರ್ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪಡೆದಿದ್ದರು. 1970ರ ವರೆಗೆ ಅವರು ಕ್ರೀಡಾ ರಂಗದಲ್ಲಿ ಸಕ್ರಿಯರಾಗಿದ್ದರು.

andolanait

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

3 hours ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

3 hours ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

3 hours ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

3 hours ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

3 hours ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

3 hours ago